ಶಿರಸಿ: ನಗರದ ಲಯನ್ಸ್ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರಮಟ್ಟದಲ್ಲಿ ಬಂಗಾರದ ಪದಕ ಪಡೆದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಡ್ಮಿಂಟನ್ ಆಟದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಿದ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಬಂಗಾರದ ಪದಕ ಪಡೆದಿದ್ದಾಳೆ.
17 ವರ್ಷದ ಒಳಗಿನ ಹುಡುಗಿಯರ ಸಿಂಗಲ್ಸ್ ನಲ್ಲಿ ಪ್ರಥಮಳಾಗಿ, 17 ವರ್ಷಗಳ ಒಳಗಿನ ಹುಡುಗಿಯರ ಡಬಲ್ಸ್ ಮತ್ತು ಮಿಕ್ಸೆಡ್ ಡಬಲ್ಸ್ ಎರಡರಲ್ಲೂ ಕಂಚಿನ ಪದಕವನ್ನು ಪಡೆದು ಶಾಲೆಗೆ, ತಾಲೂಕು, ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ಪ್ರೇರಣಾ ಸಾಧನೆ ಅವಲೋಕಿಸಿದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಪದಾಧಿಕಾರಿಗಳು ಉಚಿತ ವಸತಿ ಸಹಿತ ತರಬೇತಿ ನೀಡಲು ಮುಂದಾಗಿದ್ದಾರೆ. ಪ್ರೇರಣಾ ಸದ್ಯ ಬ್ಯಾಡ್ಮಿಂಟನ್ ನಲ್ಲಿ ಆರನೇ ರ್ಯಾಂಕ್ ನಲ್ಲಿರುವ ಯುವ ಪ್ರತಿಭೆಯಾಗಿದ್ದಾಳೆ. ಅವಳ ಈ ಸಾಧನೆಗೆ ಅವಳಿಗೂ ಅವಳ ತಂದೆ ತಾಯಂದಿರಿಗೂ- ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಮುಖ್ಯಾಧ್ಯಾಪಕರು, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಅಭಿನಂದನೆ ತಿಳಿಸಿದ್ದಾರೆ.