ದಾಂಡೇಲಿ : ತಾಲೂಕಿನ ಬಡಕಾನಶಿರಡಾದ ನಿವಾಸಿ ಹಾಗೂ ಪ್ರಗತಿಪರ ಕೃಷಿಕರಾದ ಸಾವಿತ್ರಿ ಹೇಮಣ್ಣ ಕಳಶೇಖರ ಅವರು ಭಾನುವಾರ ಮಧ್ಯಾಹ್ನ ವಿಧಿವಶರಾದರು. ಮೃತರಿಗೆ 81 ವರ್ಷ ವಯಸ್ಸಾಗಿತ್ತು.
ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಮೃತರು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸೂರ್ಯಕಾಂತ್ ಕಳಶೇಖರ್ ಸೇರಿದಂತೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಮತ್ತು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ತಾಲೂಕಿನ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.