ಅಂಕೋಲಾ: ತಾಲೂಕಿನ ರಾಮನಗುಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 9 ಕೋಟಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರದ ಕಾಮಗಾರಿಯನ್ನು ಮಾಜಿ ಶಾಸಕಿ ರೂಪಾಲಿ ನಾಯ್ಕ ವೀಕ್ಷಿಸಿದರು. ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಿಗೆ ಆಸ್ಪತ್ರೆ ನಿರ್ಮಾಣದ ಇಂಜಿನಿಯರ್ ಲಕ್ಷ್ಮೀನಾರಾಯಣ ಕಾಮಗಾರಿಯ ಪ್ರಗತಿಯ ಕುರಿತು ವಿವರಿಸಿದರು.