Slide
Slide
Slide
previous arrow
next arrow

ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ : ಡಿಸಿ ಲಕ್ಷ್ಮಿಪ್ರಿಯ

300x250 AD

ಕಾರವಾರ: ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕರೆ/ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗಲಿದೆ. ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ, ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಕೇವಲ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಉಪಯೋಗಿಸಲು/ ಬಳಸಲು ಅವಕಾಶ ಇರುತ್ತದೆ. ಪಿಒಪಿ ಮತ್ತು ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ, ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ , ಪೂಜಿಸಿದ ನಂತರ ಸಮೂಹಿಕವಾಗಿ ಸ್ಥಳೀಯ ಸಂಸ್ಥೆಗಳಿಂದ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸಬೇಕಾಗಿರುತ್ತದೆ.
ಈ ಕುರಿತು ಸ್ಥಳೀಯ ಸಂಸ್ಥೆಗಳಿಂದ ಈಗಾಗಲೇ ಪ್ರತಿವರ್ಷದಂತೆ ಈ ವರ್ಷವೂ ಮೂರ್ತಿ ವಿಸರ್ಜನೆಗಾಗಿ ಪ್ರತಿ ಸ್ಥಳೀಯ ಸಂಸ್ಥೆಯಿಂದ ಕನಿಷ್ಠ 4 ರಿಂದ 5 ಕಡೆ ಮತ್ತು ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗೆ ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಯನ್ನು ಸಂಪರ್ಕಿಸಬಹುದಾಗಿರುತ್ತದೆ. ನಿಗದಿತ ಸ್ಥಳಗಳಲ್ಲಿ ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ/ ಕಲ್ಯಾಣಿಗಳಲ್ಲಿ ಕೇವಲ ಗಣೇಶ ಮೂರ್ತಿಯನ್ನು ವಿಸರ್ಜಿಸಬೇಕಾಗಿರುತ್ತದೆ ಮತ್ತು ಅದರ ಪಕ್ಕದಲ್ಲಿಯೇ ಸ್ಥಳೀಯ ಸಂಸ್ಥೆಗಳಿಂದ ನಿಗದಿಪಡಿಸಿದ ಕಂಟೇನರ್ ಗಳಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಹಸಿ ಕಸಗಳನ್ನು ಪ್ರತೇಕಿಸಿ ಹಾಕಬೇಕು.
ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ ನಮ್ಮ ಜಿಲ್ಲೆಯಲ್ಲಿ 1434 ಸ್ಥಳಗಳಲ್ಲಿ ಸಾರ್ವಜನಿಕ ವಿಗ್ರಹಗಳನ್ನು ಇಡಲಾಗುತ್ತಿದೆ. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸ ಬೇಕು. ಸಮಿತಿಯವರು ತಮ್ಮ ಪೂಜೆ ಮತ್ತು ಅಲಂಕಾರದ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು, ಪ್ಲೆಕ್ಸ್ಗಳನ್ನು ಅಳವಡಿಸುವುದನ್ನು ನಿಷೇಧಿಸಲಾಗಿದೆ.
ರಾಷ್ಟ್ರೀಯ ಹಸಿರು ಪ್ರಾಧಿಕಾರದ ಅದೇಶದಂತೆ ಶಿಪಾರಸ್ಸು ಮಾಡಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research) & NEERI (National Environmetal Engineering Research institute) ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಇಂತಹ ಪಟಾಕಿಗಳನ್ನು ಮಾತ್ರ ಮಾರಟ ಮಾಡಲು ಎಲ್ಲಾ ಪಟಾಕಿ ಮಾರಾಟ ಮಾಡುವ ಮಳಿಗೆಗಳಿಗೆ ಮಾಹಿತಿ ನೀಡಲಾಗಿದೆ.
ಹಾಗೂ ಅಗ್ನಿಶಾಮಕ ಇಲಾಖೆಯ ನಿರ್ದೇಶನದಂತೆ ಸುರಕ್ಷತೆಯನ್ನು (ತಾತ್ಕಾಲಿಕ ಅಂಗಡಿಯ ದಾಸ್ತಾನು ಮಾಡುವುದು) ಕಾಪಾಡಿಕೊಳ್ಳಬೇಕಾಗಿರುತ್ತದೆ. ಸಾರ್ವಜನಿಕರು ಕೇವಲ ಹಸಿರು ಪಟಾಕಿಯನ್ನು ಮಾತ್ರ ಉಪಯೋಗಿಸಲು ಅವಕಾಶ ಇರುತ್ತದೆ. ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಪಟಾಕಿ ಸಿಡಿಸುವುದನ್ನು ಮತ್ತು ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದ್ದು, ಈ ಮಾಹಿತಿಯನ್ನು ಸಾರ್ವಜನಿಕ ಹಿತ ದೃಷ್ಠಿಯಿಂದ ಮತ್ತು ಜಾಗೃತಿಗಾಗಿ ಸ್ವಚ್ಛವಾಹಿನಿ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚುರಪಡಿಸಲಾಗುತ್ತಿದೆ.
ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ , ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಾಗರಿಕರು ಸಹಕರಿಸಿ, ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top