Slide
Slide
Slide
previous arrow
next arrow

ಕಾಳಿನದಿಯ-ಕದ್ರಾ ಜಲಾಶಯದ ಪ್ರವಾಹದ ಮುನ್ನೆಚ್ಚರಿಕೆ

300x250 AD

ಕಾರವಾರ: ಕಾಳಿನದಿಯ 2 ನೇ ಹಂತ ಕದ್ರಾ ಆಣೆಕಟ್ಟು ಜಲಾನಯನ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರ್‌ಗಳಾಗಿದ್ದು, ಪ್ರಸ್ತುತ ಜಲಾಶಯದ ಮಟ್ಟವು 30.5 ಮೀಟರ್‌ಗಳಾಗಿರುತ್ತದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ 22.185 ಕ್ಯುಸೆಕ್ಸ್ ಆಗಿದೆ.
ಕದ್ರಾ ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಈ ಮಳೆಗಾಲದ ಅವಧಿಯಲ್ಲಿ ಜಲಾಶಯದ ಮಟ್ಟವು ಏರಿಕೆಯಾದಾಗಲೆಲ್ಲ ಯಾವುದೇ ಸಮಯದಲ್ಲಿ ನೀರನ್ನು ಹೋರಬಿಡಲಾಗುವುದು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಹಾಗೂ ಪ್ರಾಣಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಲು ಮುಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ನಡೆಸದಂತೆ ಕಾರ್ಯನಿರ್ವಾಹಕ ಅಭಿಯಂತರರು(ಕಾ) ಕದ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top