ಶಿರಸಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಖಾಸಗೀಕರಣ, ನಿರುದ್ಯೋಗ ಸಮಸ್ಯೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಸೆ. 24 ರಂದು ಬೆಳಿಗ್ಗೆ 10:30ಕ್ಕೆ ಶಿರಸಿಯ ಬಸ್ ಸ್ಟಾಂಡ್ ಸರ್ಕಲ್ ಎದುರುಗಡೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಈ ಮೆರವಣಿಗೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅನಿಲ್ ಯಾದವ್, ಕಾರ್ಯದರ್ಶಿಗಳಾದ ಸುರಭಿ ತ್ರಿವೇದಿ, ರಾಜ್ಯ ಯುವಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯಾ, ಪ್ರಧಾನ ಕಾರ್ಯದರ್ಶಿ ಆರಿಫ್,
ಕಾರ್ಯದರ್ಶಿ ದಿಲೀಪ್, ಅಬ್ದುಲ್ ದೇಸಾಯಿ, ದೀಪಿಕಾ ಹಾಗೂ ಸಯೇದ್ ಖಾಲಿದ ಅಹ್ಮದ್ ಭಾಗವಹಿಸಲಿದ್ದಾರೆ.
ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಎಲ್ಲ ಹಿರಿ ಕಿರಿಯ ಕಾರ್ಯಕರ್ತರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.