ದಾಂಡೇಲಿ: ನಗರದ ಅಂಬೇವಾಡಿಯ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 400 ವಿದ್ಯಾರ್ಥಿಗಳ ಜೊತೆಗೆ ದುರ್ವರ್ತನೆ ತೋರಿದ ಪ್ರಾಚಾರ್ಯ ವಿಶ್ವನಾಥ ಹುಲಸದಾರ ಮತ್ತು ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಪಿಐ ಅವರ ನಡೆಯನ್ನು ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುನಿಲ್ ಹೆಗಡೆಯವರು ತೀವ್ರವಾಗಿ ಖಂಡಿಸಿ ಸಂಬಂಧಪಟ್ಟ ಇಲಾಖೆಗಳು ಈ ಇಬ್ಬರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದುರ್ನಡತೆಯ ಪ್ರಾಚಾರ್ಯ, ಸಿಪಿಐ ಮೇಲೆ ಸೂಕ್ತ ಕ್ರಮಕ್ಕೆ ಸುನೀಲ ಹೆಗಡೆ ಆಗ್ರಹ
