ಕಾರವಾರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:Tel:+9108382201824ಹಾಗೂ ಮೊಬೈಲ್ ಸಂಖ್ಯೆ:Tel:+919480886551 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.