ಶಿರಸಿ: ಎಡಬಿಡದೆ ಹೊಯ್ಯುತ್ತಿರುವ ಮಳೆಯಿಂದಾಗಿ ಅಡಿಕೆಗೆ ಕೊಳೆ ರೋಗ ತಗುಲಿ ಬೆಳೆಗಾರರು ಸಂಕಷ್ಷ ಅನುಭವಿಸುತ್ತಿದ್ದಾರೆ. ಇದರಿಂದ ಪಾರಾಗಲು ಲೋಕ ಕಲ್ಯಾಣಾರ್ಥ ಪ್ರತಿ ಗ್ರಾಮದಲ್ಲೂ ಧಾರ್ಮಿಕ ರುದ್ರ ಹೋಮ ಹಮ್ಮಿಕೊಳ್ಳಬೇಕು ಎಂಬ ಶ್ರೀ ಸೋಂದಾ ಸ್ವರ್ಣವಲ್ಲೀ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ಸೂಚನೆ ಮೇರೆಗೆ ಕೊಳಗಿಬೀಸ್ ಶ್ರೀ ಮಾರುತಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವೇ.ಬ್ರ.ಕುಮಾರ ಭಟ್ಟ ಅವರ ಮಾರ್ಗದರ್ಶನದಲ್ಲಿ ಶ್ರಾವಣ ಶನಿವಾರ ರುದ್ರ ಹೋಮ ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಕೊಳೆರೋಗ ನಿವಾರಣಾರ್ಥ ‘ರುದ್ರ ಹೋಮ’
