ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ ಗಾಯಿತ್ರಿ ತಿಳಿಸಿದ್ದಾರೆ. ಅ.30 ರೊಳಗೆ ಅರ್ಜಿ ಸಲ್ಲಿಸಿಸ ಬಹುದಾಗಿದ್ದು ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರು ಪಾವತಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.ಆಸಕ್ತರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಶುಲ್ಕ ಮರು ಪಾವತಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
