ಕಾರವಾರ:ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ತಲಾ ರೂ. 25,000/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲು ಜಿಲ್ಲೆಯಲ್ಲಿರುವ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಸೆ.18 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರವಾರ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರವಾರ ಇವರನ್ನು ಸಂಪರ್ಕಿಸಿ ಪಡೆಯಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.