ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನಿಮಿತ್ತ ಆಚರಿಸಲ್ಪಡುವ ರಾಷ್ಟ್ರೀಯ ಶಿಕ್ಷಕರ ದಿನವನ್ನು ವಿಧಾತ್ರಿ ಅಕಾಡೆಮಿಯ ಪರಂಪರೆಯಂತೆ ಪ್ರತಿವರ್ಷವೂ ವಿಶಿಷ್ಟವಾಗಿ ಆಚರಿಸುವ ಮೂಲಕ ತಮಗೆ ಕಲಿಸಿದ ಗುರುಗಳಿಗೆ ನಮನ ಸಲ್ಲಿಸಿದರು.
ಸಂಸ್ಥೆಯಲ್ಲಿ ಕಲಿಯುತ್ತಿರುವ ಕುಮಟಾ, ಹೊನ್ನಾವರ, ಅಂಕೋಲಾ, ಕಾರವಾರ, ಶಿರಸಿ ಹಾಗೂ ಯಲ್ಲಾಪುರ ತಾಲೂಕಿನ ವಿವಿಧ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ತಮಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ನೀಡಿದ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ, ಶಿಕ್ಷಕರಿಗೆ ಗೌರವಪೂರ್ವಕವಾಗಿ ನೆನಪಿನ ಕಾಣಿಕೆ ಹಾಗೂ ಸಿಹಿಯನ್ನು ಹಂಚಿ, ಶಿಕ್ಷಕರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು, ಅಕಾಡೆಮಿಯ ಪಿ.ಆರ್. ಒ. ನಿತೇಶ ಮೆಸ್ತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.