ಸಿದ್ದಾಪುರ: ದೇಶದ ಭವಿಷ್ಯವನ್ನು ರೂಪಿಸುವ ಮುಂದಿನ ಸತ್ಪ್ರಜೆಗಳನ್ನು ನಿರ್ಮಾಣ ಮಾಡುವ ಪವಿತ್ರಕಾರ್ಯವನ್ನು ಮಾಡುತ್ತಿರುವ ಶಿಕ್ಷಕರು ಅಭಿನಂದನಾರ್ಹರು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ ದಿನೋತ್ಸವ ಹಾಗೂ ಗುರುಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಅವರು ಮಾತನಾಡಿ, ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ಶಿಕ್ಷಕರಿಗೆ ಸಲ್ಲುತ್ತದೆ. ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ರೀತಿಯ ಸೌಲಭ್ಯವನ್ನು ಒದಗಿಸಿದೆ. ಸಮಾಜದಲ್ಲಿ ಉಳಿದ ನೌಕರರಿಗಿಂತ ಶಿಕ್ಷರಿಗೆ ಹೆಚ್ಚಿನಗೌರವ ಸಿಗುತ್ತಿದ್ದು ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ ಎಂದು ಹೇಳಿದರು.
ಪಪಂ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕಿನ ೬ಜನ ಶಿಕ್ಷಕರಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ, ಮತ್ತು ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಮತ್ತು ಸಾಧಕ ಶಿಕ್ಷರನ್ನು ಗೌರವಿಸಲಾಯಿತು.
ತಹಸೀಲ್ದಾರ ಎಂ.ಆರ್.ಕುಲಕರ್ಣಿ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ,ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ನಾಯ್ಕ, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಜೇಶ ಆರ್. ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ. ವಿ. ನಾಯ್ಕ,ತಾಲೂಕು ಕಸಾಪ ಅಧ್ಯಕ್ಷ ಗೋಪಾಲ ನಾಯ್ಕ , ಎಸ್.ಎಸ್.ಪಮ್ಮಾರ, ಟಿ.ಕೆ.ನಾಯ್ಕ, ಲೋಕೇಶ ನಾಯ್ಕ ಇತರರಿದ್ದರು.ಬಿಇಒ ಎಂ. ಎಚ್. ನಾಯ್ಕ ಸ್ವಾಗತಿಸಿದರು.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಕಾರ್ಯದರ್ಶಿ ಗುರುರಾಜ ನಾಯ್ಕ, ಗಣೇಶ ಜೋಶಿ ಮತ್ತು ರೇಷ್ಮಾ ಕಾರ್ಯಕ್ರಮ ನಿರ್ವಹಿಸಿದರು. ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.