Slide
Slide
Slide
previous arrow
next arrow

ರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ಪ್ರಶಸ್ತಿ ನೀಡಿ, ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ವ್ಯಕ್ತಿಯು, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದವರು ಸಂಬಂಧಪಟ್ಟ ಸಹಾಯಕ ನಿರ್ದೇಶಕರು (ಗ್ರೇ-1/2). ಸಮಾಜ ಕಲ್ಯಾಣ ಇಲಾಖೆಯವರಿಂದ ಅರ್ಜಿ ನಮೂನೆಯನ್ನು ಪಡೆದು ದಾಖಲೆಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಕಛೇರಿಗೆ ಸೆ.17 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:Tel:+9108382226575, Tel:+919449019426 ನ್ನು ಸಂಪರ್ಕಿಸುವAತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top