ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕುಮಟಾ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಹಾಗೂ ಬಾಲಕಿಯರ ವಿಭಾಗದ ಥ್ರೋ ಬಾಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಬಾಲಕಿಯರ ವಿಭಾಗದ ಥ್ರೋ ಬಾಲ್ ನಲ್ಲಿ ಜಾಸ್ಮಿನ್ ಹಾಗೂ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಲಗ್ಗೆಯಿಟ್ಟಿದ್ದಾರೆ. ಹಾಗೆಯೇ ಬಾಲಕರ ವಿಭಾಗದ ಥ್ರೋ ಬಾಲ್ ನಲ್ಲಿ ಧೀರಜ್ ಹಾಗೂ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಚಾರ್ಯರಾದ ಕಿರಣ ಭಟ್ಟ, ಉಪಪ್ರಾಚಾರ್ಯರಾದ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕರಾದ ದೀಪಕ ನಾಯ್ಕ, ದೀಕ್ಷಿತಾ ಕುಮಟಾಕರ, ವೇದಾ ನಾಯ್ಕ, ಸೋಮನಾಥ ಗೌಡ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭಹಾರೈಸಿದರು.