ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಎಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.