Slide
Slide
Slide
previous arrow
next arrow

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಪರಿಣಾಮಕಾರಿಯಾಗಿ ಆಯೋಜಿಸಿ: ಈಶ್ವರ ಕಾಂದೂ

300x250 AD

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಹೇಳಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, RWS/LAB ಕಟ್ಟಡಗಳು/ ಶೌಚಾಲಯಗಳು/ ಆವರಣದಲ್ಲಿ ಶ್ರಮದಾನ ಮಾಡುವ ಮೂಲಕ ಸಂಪೂರ್ಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮದ ಪ್ರಮುಖ ಬೀದಿ, ಶಾಲಾ ಆವರಣ, ಆಟದ ಮೈದಾನ, ಕಲ್ಯಾಣಿ, ಧಾರ್ಮಿಕ ಕೇಂದ್ರಗಳ ಸಮೀಪ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಗ್ರಾಮದ ಅತ್ಯಂತ ಹೆಚ್ಚು ತ್ಯಾಜ್ಯ ಸಂಗ್ರಹವಾಗುವ ಪ್ರದೇಶ ಮತ್ತು ಅಧಿಕ ಅನೈರ್ಮಲ್ಯ ಇರುವ ಸ್ಥಳ/ಬೀದಿ ಹಾಗೂ ಗಲೀಜು ಇರುವ ಸ್ಥಳಗಳನ್ನು ಗುರತಿಸಿ ಸ್ವಚ್ಛಗೊಳಿಸಬೇಕು ಎಂದರು.
ಶೌಚಾಲಯ ಬಳಕೆ ಕುರಿತು ಪ್ರಭಾತ್ ಪೇರಿ ಚಟುವಟಿಕೆಗಳನ್ನು ಆಯೋಜಿಸಬೇಕು, ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳ ಆಯೋಜನೆ, ಶಾಲಾ ಮಕ್ಕಳಲ್ಲಿ ಸ್ಲೋಗನ್ ಬರೆಯುವ ಸ್ಪರ್ಧೆ ಆಯೋಜಿಸಬೇಕು ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಮತ್ತು ಓಡಿಎಪ್ ಪ್ಲಸ್ ಸುಸ್ಥಿರತೆ ಅಂಶಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ, ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಬೇಕು, ಜಿಲ್ಲೆಯ ಗುರುತಿಸಲ್ಪಟ್ಟ 36 ಪ್ರವಾಸಿ ತಾಣಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಾಲಯಗಳನ್ನು ಗುರುತಿಸಿ ಸುತ್ತ ಮುತ್ತ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೆ ವಿವಿಧ ಇಲಾಖೆಗಳಿಂದÀ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದು ಅವರು ಈ ಪಾಕ್ಷಿಕದ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಸಮುದಾಯ ಶೌಚಾಲಯಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಈ ಶೌಚಾಲಯಗಳು ನಿರುಪಯುಕ್ತವಾಗಿದ್ದಲ್ಲಿ ಅವುಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಚರಿಸಲು, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಪಂ.ರಾಜ್ ಇಂಜಿನಿಯಿರಿAಗ್ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top