ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ /ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 3 ವಿಭಾಗಗಳಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರ ವಿವರ ಮುಂದಿನಂತಿದೆ.
ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲೆಯಾದ್ಯಂತ 583 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ ಅತ್ಯುತ್ತಮ 3 ಪ್ರಬಂಧಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಮುಂಡಗೋಡ ತಾಲೂಕಿನ ಹುನಗುಂದದ ಸರ್ಕಾರಿ ಪ್ರೌಢ ಶಾಲೆಯ ಸಮರ್ಥ ನಾಗರಾಜ ಅರ್ಕಸಾಲಿ (ಪ್ರಥಮ), ಹೊನ್ನಾವರ ತಾಲೂಕಿನ ಅರೆಅಂಗಡಿಯ ಎಸ್.ಕೆ.ಪಿ ಪ್ರೌಢಶಾಲೆಯ ಸುವರ್ಣಾ ಎಸ್ ಭಾಗವತ್ (ದ್ವಿತೀಯ), ಶಿರಸಿಯ ಮಾರಿಕಾಂಬಾ ಪ್ರೌಢ ಶಾಲೆಯ ದಿಶಾ ರಾಜೇಶ ನಾಯ್ಕ (ತೃತೀಯ) ಸ್ಥಾನ ಪಡೆದಿದ್ದಾರೆ.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಜಿಲ್ಲೆಯಾದ್ಯಂತ 301 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ ಅತ್ಯುತ್ತಮ 3 ಪ್ರಬಂಧಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಶಿರಸಿ ತಾಲೂಕು, ಕಲ್ಲಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನ ಮಧುರಾ ರಮೇಶ ಮಡಿವಾಳ (ಪ್ರಥಮ), ಹೊನ್ನಾವರದ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಶ್ರೇಯಾ ಅಣ್ಣಪ್ಪ ಗೌಡ (ದ್ವಿತೀಯ), ಕುಮಟಾ ತಾಲೂಕಿನ ನೆಲ್ಲಿಕೇರಿ ಸರ್ಕಾರಿ ಹನುಮಂತ ಬೆಣ್ಣೆ ಪದವಿ ಪೂರ್ವ ಕಾಲೇಜಿನ ರೇವತಿ ಮಾಸ್ತಿ ಮುಕ್ರಿ (ತೃತೀಯ) ಸ್ಥಾನ ಪಡೆದಿದ್ದಾರೆ.
ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಅತ್ಯುತ್ತಮ 3 ಪ್ರಬಂಧಗಳನ್ನು ಪ್ರಾಂಶುಪಾಲರು, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮತ್ತು ಲೀಡ್ ಕಾಲೇಜು ಕಾರವಾರ ಅವರ ನೇತೃತ್ವದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗಿದ್ದು, ಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ತೇಜಾ ಎಂ ನಾಯ್ಕ (ಪ್ರಥಮ), ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿನಾಯಕ ರಮೇಶ ನಾಯ್ಕ (ದ್ವಿತಿಯ), ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೀರ್ತನಾ ಶೇಖರ ನಾಯ್ಕ (ತೃತೀಯ) ಸ್ಥಾನ ಪಡೆದಿದ್ದಾರೆ.
ವಿಜೇತರಿಗೆ ಅಕ್ಟೋಬರ್ 2 ರಂದು ಗಾಂಧೀ ಜಯಂತಿ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್ ತಿಳಿಸಿದ್ದಾರೆ.