Slide
Slide
Slide
previous arrow
next arrow

ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜನಾಂದೋಲನ ರೀತಿಯಲ್ಲಿ ಆಯೋಜಿಸಿ ; ಸಂಸದ ಕಾಗೇರಿ

300x250 AD

ಕಾರವಾರ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಸಾರ್ವಜನಿಕರಿಗೆ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ಜಿಲ್ಲೆಯಾದ್ಯಂತ ಸೆ.17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಭಾಗವಹಿಸುವವಂತೆ ಜನಾಂದೋಲನದ ರೀತಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅವಧಿಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪ್ರಮುಖ ಧ್ಯೇಯವಾದ ಸ್ವಭಾವ ಸ್ಚಚ್ಛತೆ ಮತ್ತು ಸಂಸ್ಕಾರ ಸ್ವಚ್ಛತೆ ಮನೋಭಾವವು ಪಾಕ್ಷಿಕದ ಅವಧಿಗೆ ಮಾತ್ರ ಸೀಮಿತವಾಗದೇ, ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರೂ ಪ್ರತಿ ದಿನವೂ ನಿರಂತರವಾಗಿ ಆಚರಿಸಬೇಕು ಹಾಗೂ ಇದನ್ನು ದೈನಂದಿನ ಜೀವನದ ಚಟುವಟಿಕೆಯನ್ನಾಗಿ ಮಾಡಿಕೊಳ್ಳಬೇಕು ಎಂದ ಸಂಸದರು, ಸ್ವಚ್ಚತೆಯ ಕುರಿತಂತೆ ಪ್ರತಿಯೊಬ್ಬ ನಾಗರೀಕರಲ್ಲೂ ಸಿವಿಕ್ ಸೆನ್ಸ್ ಜಾಗೃತಿ ಮೂಡುವಂತಾಗಬೇಕು ಎಂದರು.

300x250 AD

ಸ್ವಚ್ಛತಾ ಕಾರ್ಯಕ್ರಮಗಳ ಮೂಲಕ ಪ್ರಕೃತಿಯ ಮೇಲೆ ನಡೆಯುತ್ತಿರುವ ಹಾನಿಯನ್ನು ಮತ್ತು ಮಾಲಿನ್ಯದ ಶೋಷಣೆಯನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಮಾಲಿನ್ಯರಹಿತ ಪರಿಸರವನ್ನು ಕೊಡುಗೆಯನ್ನಾಗಿ ನಿಡುವ ಮಹತ್ತರವಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.
ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುವ ಕುರಿತಂತೆ ಕಾರ್ಯಕ್ರಮಗಳನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಸೀಮಿತಗೊಳಿಸದೇ, ಜಿಲ್ಲೆಯ ಎಲ್ಲಾ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆದು ವ್ಯಾಪಕ ರೀತಿಯಲ್ಲಿ ಜಾಗೃತಿ ಮೂಡಿಸಿ, ಚಟುವಟಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಗಾಂಧೀ ಜಯಂತಿಯಂದು ಜಿಲ್ಲೆಯಾದ್ಯಂತ ಕನಿಷ್ಠ 2 ಗಂಟೆಗಳ ಕಾಲ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ವಾರ್ಡ್, ರಸ್ತೆಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು.
ಕಸವನ್ನು ಸಂಪನ್ಮೂಲವನ್ನಾಗಿ ಪರಿವತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೆ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಮಾತನಾಡಿ, ಸುಸ್ಥಿರ ಅಭಿವೃದ್ದಿಯ ಜೊತೆಗೆ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್, ನಗರಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top