Slide
Slide
Slide
previous arrow
next arrow

ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮ

300x250 AD

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಅಂಗವಾಗಿ ಶುಕ್ರವಾರ ಕಾರವಾರದ ಬಿಣಗಾ ಒಕ್ಕಲಕೇರಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿಲಾದ ಪೂರಕ ಪೌಷ್ಠಿಕ ಆಹಾರದ ಕುರಿತು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಉದ್ಘಾಟಿಸಿದರು.

ಗರ್ಭಿಣಿ, ಬಾಣಂತಿ ಮಕ್ಕಳಿಗೆ ಸರಿಯಾದ ಸಮಯಕ್ಕೆ ಪೂರಕ ಪೌಷ್ಠಿಕ ಆಹಾರದ ಸೇವನೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸೀಮಂತ ಮತ್ತು ಅನ್ನಪ್ರಾಶನ ಕಾರ್ಯಕ್ರಮನ್ನು ನಡೆಸಿ ಅದರ ಮಹತ್ವದ ಕುರಿತು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಎಸ್. ಐಗಳ್ ಮಕ್ಕಳ ಪಾಲನೆ ಪೋಷಣೆ, ರಕ್ಷಣೆಯ ಕುರಿತು ಮಾಹಿತಿಯನ್ನು ನೀಡಿ, ಇಂದಿನ ನಮ್ಮ ಸಮಾಜವನ್ನು ಬಾಲ್ಯವಿವಾಹ ಮುಕ್ತ ಸಮಾಜವನ್ನಾಗಿಸೋಣ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರೂಪಾಕ್ಷ ಗೌಡ ಪಾಟೀಲ ಗರ್ಭಿಣಿ, ಬಾಣಂತಿ ಮಕ್ಕಳು ಸರಿಯಾದ ಸಮಯಕ್ಕೆ ಪೂರಕ ಪೌಷ್ಠಿಕ ಆಹಾರ ಸೇವಿಸುವ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶ್ವೇತಾ ನಾಯ್ಕ, ಪ್ರಕಾಶ ಪಿ ನಾಯ್ಕ, ಸ್ತ್ರೀ ಶಕ್ತಿ ಸಂಘ ಪ್ರತಿನಿಧಿ ಮಂಗಲಾ ಗೌಡ, ಶಾಲಾ ಶಿಕ್ಷಕರು ಬಾ¯ ವಿಕಾಸ ಸಮಿತಿಯ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಹಿರಿಯ ಆರೋಗ್ಯ ಮಹಿಳಾ ಸಹಾಯಕಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಮಕ್ಕಳ ಪಾಲಕರು ಪೋಷಕರು, ಊರ ನಾಗರಿಕರು ಮತ್ತು ಕಾರವಾರ-3 ವಲಯದ ಅಂಗನವಾಡಿ ಕಾರ್ಯಕರ್ತೆಯರು, ಪೋಷಣಾ ಆಭಿಯಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬಗೆಯ ಪೂರಕ ಪೌಷ್ಠಿಕ ಆಹಾರವನ್ನು ತಯಾರಿಸಿ ಪ್ರದರ್ಶಿಸಿದರು.

300x250 AD
Share This
300x250 AD
300x250 AD
300x250 AD
Back to top