Slide
Slide
Slide
previous arrow
next arrow

ಸೆ:21ಕ್ಕೆ ದಾಂಡೇಲಿಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ

300x250 AD

ದಾಂಡೇಲಿ: ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಸೆ:21 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಪವಿತ್ರಾ ಶ್ಯಾಮ್ ಸುಂದರ್ ಹಾಗೂ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕು ಸೇರಿದಂತೆ ಸುತ್ತಮುತ್ತಲ ಸಾರ್ವಜನಿಕರು ಭಾಗವಹಿಸಿ ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ನಗರದ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮೋಹನ್ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

300x250 AD

ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ನಡೆದ ಉಚಿತ ಬಂಜೆತನ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದ ಸಾಕಷ್ಟು ಸಂಖ್ಯೆಯ ದಂಪತಿಗಳ ಸಮಸ್ಯೆ ಪರಿಹಾರವಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Share This
300x250 AD
300x250 AD
300x250 AD
Back to top