ಸಿದ್ದಾಪುರ: ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಪ್ರದೇಶದ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡವು ಸೆ.30 ನಿಗದಿಗೊಳಿಸಿರುವ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶದ ಜನಪ್ರತಿನಿಧಿಗಳ ಮತ್ತು ಸಚಿವರ ವಿಶೇಷ ಸಭೆಯನ್ನು ಬೆಂಗಳೂರಿನಲ್ಲಿ ಸಭೆಯ ತೀರ್ಮಾನವನ್ನು ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಲು ಸೆ.19ರಂದು ನಿಗದಿಗೊಳಿಸಿದೆ ಎಂದು ಹೋರಾಟಗಾರ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರಡು ಕಸ್ತೂರಿ ರಂಗನ್ ವರದಿಯ ಜಾರಿಗೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷದಿಂದ ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಜಿಲ್ಲಾ ಪಂಚಾಯತ, ವಿವಿಧ ತಾಲೂಕ ಪಂಚಾಯತ, ಗ್ರಾಮ ಪಂಚಾಯತಗಳಲ್ಲಿ ವರದಿಗೆ ವಿರೋಧವಾಗಿ ಠರಾವು ಸ್ವೀಕರಿಸಲಾಗಿತ್ತು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು 1 ಲಕ್ಷ ಕುಂಟುಬಗಳಿಂದ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲಾಗಿತ್ತು ಎಂದು ರವೀಂದ್ರ ನಾಯ್ಕ ಹೇಳಿದರು.
ಅಲ್ಲದೇ, ವಿಧಾನ ಸಭೆ ಅಧಿವೇಶನದಲ್ಲಿಯೂ ತಿರಸ್ಕರಿಸಲು ಸರ್ವಾನುಮತದಿಂದ ಪಕ್ಷಾತೀತವಾಗಿ ತೀರ್ಮಾನಿಸಿ, ರಾಜ್ಯ ಸರ್ಕಾರದ ವೈಜ್ಞಾನಿಕ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ವಿರೋಧ ಪ್ರಸ್ತವಾವನೆ ಸಲ್ಲಿಸುವುದುಮ ಅವಶ್ಯವಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಸೂಕ್ಷ್ಮ ಪ್ರದೇಶದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ 604 ಹಳ್ಳಿ:
ಜಿಲ್ಲೆಯಲ್ಲಿನ 9 ತಾಲೂಕಗಳಲ್ಲಿ 604 ಹಳ್ಳಿಗಳು ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತಿದ್ದು, ಜಿಲ್ಲೆಯ ಸುಮಾರು 138 ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಅತೀ ಸೂಕ್ಷ್ಮ ಪ್ರದೇಶಗಳು ಗುರುತಿಸುವಿಕೆಯಾಗಿರುವುದರಿಂದ ಜಿಲ್ಲೆಯ ಭೌಗೋಳಿಕವಾಗಿ ಶೇ.60 ರಷ್ಟು ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರ್ಪಡೆಗೊಳೂವುದರಿಂದ ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವ್ಯಸ್ಥೆ ಮತ್ತು ಮೂಲಭೂತಸೌಕರ್ಯಗಳ ಮೇಲೆ ತೀವ್ರ ತರದ ಪರಿಣಾಮಬೀರುವುದೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.