ದಾಂಡೇಲಿ : ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಬಾಲಕಿಯರ ವಿಭಾಗದಲ್ಲಿ ಮತ್ತು ಚದುರಂಗ ಸ್ಪರ್ಧೆಯಲ್ಲಿ ದಾಂಡೇಲಿಯ ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.
ಶಿರಸಿಯಲ್ಲಿ ನಡೆದ ಜಿಲ್ಲಾಮಟ್ಟದ ಪಂದ್ಯಾವಳಿಯ ಅಂತಿಮ ಪಂದ್ಯಾವಳಿಯಲ್ಲಿ ಶಿರಸಿ ತಂಡವನ್ನು ಸೋಲಿಸಿ ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಸುರಭಿ ಕೃಷ್ಣ ಲಕ್ಷ್ಮಿಶ್ವರ, ಇಕ್ರ ಖಾನ್ ಜಮಾದಾರ್, ಶ್ರಾವಣಿ ದೇಶ ಭಂಡಾರಿ ಇವರ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚದುರಂಗ ಸ್ಪರ್ಧೆಯಲ್ಲಿ ಮಧುರ್.ಎಸ್ ಮಾಸರೆಕರ್ ಈತನು ಕೂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಯುವರಾಜ್ ಹೊಸಮಠ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಹಾಗೆ ಯೋಗಾಸನ ಸ್ಪರ್ಧೆಯಲ್ಲಿ ವೇದಾಂತ ಶೆಣೈ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳ ಸಾಧನೆಗೆ ಜನತಾ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ರೀಟಾ ಡಯಾಸ್, ಜನತಾ ಪಿಯು ಕಾಲೇಜಿನ ಪ್ರಾಚಾರ್ಯ ಉಪೇಂದ್ರ ಘೋರ್ಪಡೆ, ಶಾಲಾ ಮುಖ್ಯೋಪಾಧ್ಯಾಯರಾದ ಎಂ.ಬಿ.ಅರವಳ್ಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನವೀನ್ ಕಾಮತ್, ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಗಾಂವಕರ, ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ, ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.