ದಾಂಡೇಲಿ : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿ ಇದ್ದು, ಒಂದೆರಡು ಕಡೆ ಮಕ್ಕಳ ಮೇಲೆ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣದ ಕುರಿತಂತೆ ನಗರಸಭೆಯಲ್ಲಿ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ಜರುಗಿತು.
ಸಭೆಯಲ್ಲಿ ಬೀದಿ ನಾಯಿಗಳ ನಿಯಂತ್ರಣದ ಕುರಿತಂತೆ, ಪಶುವೈದ್ಯ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಲ್ಲಿ ಮಾತನಾಡಿದ ಪ್ರಕಾರ ಸಂತಾನ ಹರಣ ಚಿಕಿತ್ಸೆಗೆ ಅಗತ್ಯ ಕ್ರಮವನ್ನು ಕೈಗೊಳ್ಳುವುದು. ನಗರದ ಕೊಂಡವಾಡದಲ್ಲಿ ಸಂತಾನ ಹರಣ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು. ಈ ಕಾರ್ಯಕ್ಕೆ ಸಂಬಂಧಪಟ್ಟಂತೆ ಸೆ:19ರಂದು ನಡೆಯಲಿರುವ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಚರ್ಚಿಸಿದ ಬಳಿಕ ಪಶು ವೈದ್ಯ ಇಲಾಖೆಯ ಉಪನಿರ್ದೇಶಕರಿಗೆ ಮುಂದಿನ ಪ್ರಕ್ರಿಯೆಯ ಕುರಿತಂತೆ ಪತ್ರವನ್ನು ಬರೆದು ಅಗತ್ಯ ಸಲಹೆಯನ್ನು ಪಡೆದುಕೊಂಡ ನಂತರ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಟೆಂಡರ್ ಕರೆಯುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್,ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ನಗರ ಸಭಾ ಸದಸ್ಯರುಗಳಾದ ಯಾಸ್ಮಿನ್ ಕಿತ್ತೂರು, ಸಂಜಯ ನಂದ್ಯಾಳ್ಕರ, ಮೌಲಾಲಿ ಮುಲ್ಲಾ, ಮೋಹನ ಹಲವಾಯಿ,ಅನಿಲ್ ನಾಯ್ಕರ, ಆಸೀಪ್ ಮುಜಾವರ, ಪಶುವೈದ್ಯರಾದ ಡಾ.ಅರ್ಚನಾ, ನಗರ ಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಭಯ್ ಕುಮಾರ್, ನಾಗೇಂದ್ರ ದೊಡ್ಡಮನಿ, ನಗರ ಸಭೆಯ ಆರೋಗ್ಯ ನಿರೀಕ್ಷಕರಾದ ವಿಲಾಸ್, ನಗರ ಸಭೆಯ ಶುಭಂ ರಾಯ್ಕರ್ ಮೊದಲಾದವರು ಉಪಸ್ಥಿತರಿದ್ದರು.