Slide
Slide
Slide
previous arrow
next arrow

ಮಾಧವಾನಂದ ಶ್ರೀಗಳ ಸೀಮೋಲ್ಲಂಘನ

300x250 AD

ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವು ಮಠದ ಪೀಠಾದೀಶ್ವರರಾದ ಶ್ರೀ ಶ್ರೀ ಮಾಧವಾನಂದ ಭಾರತಿ ಮಹಾಸ್ವಾಮಿಗಳು ಚಾತುರ್ಮಾಸ್ಯ ವ್ರತ ಸಮಾಪ್ತಿ ಅಂಗವಾಗಿ ನೆಲೆಮಾವು ನದಿ ತೀರದಲ್ಲಿ ಗಂಗಾಪೂಜೆ ನೆರವೇರಿಸಿ ಸೀಮೋಲ್ಲಂಘನ ಗೈದರು.

ಶ್ರೀಮಠದಲ್ಲಿ ವಿಶೇಷ ಅನುಷ್ಠಾನ, ಶ್ರೀ ಲಕ್ಷ್ಮೀನರಸಿಂಹ ದೇವರ ಪೂಜಾ ಕೈಂಕರ್ಯಗಳನ್ನು ಶ್ರೀಗಳವರು ನೆರವೇರಿಸಿದರು. ನಂತರ ಹೇರೂರಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಾಗೂ ಸರಕುಳಿಯ ಶ್ರೀ ಮಹಿಷಾಸುರ ಮರ್ಧಿನಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

300x250 AD

ಈ ಸಂದರ್ಭದಲ್ಲಿ ಶ್ರೀಮಠದ ಆಡಳಿತ ಸಮಿತಿಯ ಅಧ್ಯಕ್ಷರು, ವೈದಿಕರು, ಆಡಳಿತ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top