ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಹಕಾರ ಮಹಾಮಂಡಳ. ನಿ. ಬೆಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಯುನಿಯನ್ ನಿ., ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ಉತ್ತರ ಕನ್ನಡ ಜಿಲ್ಲಾ ಮಟ್ಟದ 2024-25 ನೇ ಸಾಲಿನ ಚರ್ಚಾ ಸ್ಪರ್ಧೆಯಲ್ಲಿ ಅತ್ಯುತ್ತಮ ವಾಕ್ ಚಾತುರ್ಯವನ್ನು ತೋರಿ ವಿಜೇತರಾಗಿ ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕು. ವೃಂದಾ ಶಾನಭಾಗ, ಚರ್ಚಾ ಸ್ಪರ್ಧೆಯಲ್ಲಿ ನೀಡಿದ ವಿಷಯದ ಪರವಾಗಿ ಮಾತನಾಡುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಳು. ಕು. ದೀಪಿಕಾ ಭಟ್ಟ, ಚರ್ಚಾ ಸ್ಪರ್ಧೆಯಲ್ಲಿ ನೀಡಿದ ವಿಷಯದ ವಿರೋಧವಾಗಿ ಮಾತನಾಡಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ವಿದ್ಯಾರ್ಥಿಗಳ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಚಾರ್ಯರು, ಉಪಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಶುಭಹಾರೈಸಿದರು.