ಹೊನ್ನಾವರ ತಾಲೂಕ ಪಂಚಾಯತ್ ಸಭೆಯಲ್ಲಿ ಆಡಳಿತಾಧಿಕಾರಿ ವಿನೋದ್ ಅಣ್ವೇಕರ್ ಭಾಗಿ
ಹೊನ್ನಾವರ : ತಾಲೂಕ ಪಂಚಾಯತ್ ಸಭಾಭವನದಲ್ಲಿ ತಾಲೂಕ ಪಂಚಾಯತ್‌ನ ಸಾಮಾನ್ಯ ಸಭೆಯು ಶುಕ್ರವಾರ ನಡೆಯಿತು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಲೋಕೋಪಯೋಗಿ ಕೃಷಿ ತೋಟಗಾರಿಕೆ ಪಶುಪಾಲನೆ, ಸಮಾಜ ಕಲ್ಯಾಣ, ಅರಣ್ಯ ಮುಂತಾದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಹಾಗೂ ಹೊನ್ನಾವರ ತಾಲೂಕ ಪಂಚಾಯತ್ ಆಡಳಿತ ಅಧಿಕಾರಿಗಳಾದ ವಿನೋದ್ ಅಣ್ವೇಕರ್ ವಹಿಸಿ ಮಾತನಾಡಿ, ಸರ್ಕಾರದಿಂದ ನಿಗದಿಪಡಿಸಿದ ವಿವಿಧ ಯೋಜನೆಗಳ ಗುರಿಗಳನ್ನು ನಿಗದಿತ ಸಮಯದೊಳಗೆ ಸಂಪೂರ್ಣಗೊಳಿಸುವ ಜವಾಬ್ದಾರಿ ಆಯಾ ಇಲಾಖೆಯ ಅಧಿಕಾರಗಳದ್ದಾಗಿದೆ ಎಂದರು.
ಹಿಂದಿನ ಸಾಲಿನಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಬಸ್ ನಿಲ್ದಾಣಗಳಲ್ಲಿ ಶೌಚಾಲಯ ಉಪಯೋಗಿಸುವ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು ಇರುವ ಆರೋಪದ ಬಗ್ಗೆ ಚರ್ಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಎಚ್ಚರಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಹೊನ್ನಾವರ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚೇತನ್ ಕುಮಾರ್ ರವರು ಇಲಾಖೆಗಳ ಸಮನ್ವಯದೊಂದಿಗೆ ಪ್ರಶಕ್ತ ಸಾಲಿನ ಕಾಮಗಾರಿಗಳನ್ನು ನಿಯಮಾನುಸಾರ ಕೈಗೊಂಡು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ತಿಳಿಸಿದರು. ತಾಲೂಕ ಪಂಚಾಯತ್ ವ್ಯವಸ್ಥಾಪಕರಾದ ರಾಮ್ ಭಟ್ ಸ್ವಾಗತಿಸಿ ವಂದಿಸಿದರು.
ಬಸ್ ನಿಲ್ದಾಣಗಳಲ್ಲಿ ಶೌಚಾಲಯ ಉಪಯೋಗಿಸುವ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು ಆರೋಪವಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಿ
ವಿನೋದ ಅಣ್ವೇಕರ್
ತಾ. ಪಂ. ಆಡಳಿತಾಧಿಕಾರಿ