Slide
Slide
Slide
previous arrow
next arrow

ಕ್ರೀಡಾಕೂಟ: ಅಸ್ವಿತಾ ಮಿರಾಶಿ ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಶಿರಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮುಂಡಗೋಡ ಸಹಯೋಗದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ನಡೆದಿದ್ದು, ಶಿಂದೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಮಾರಿ ಅಸ್ವಿತಾ ಮಿರಾಶಿ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ, ಸಹ ಶಿಕ್ಷಕರಾದ ಆನಂದ ಪಿ,ಶಾಲಾ ಆಡಳಿತ ಮಂಡಳಿಯವರು, ಪಾಲಕರು,ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷ ಯಶವಂತ ನಾಯ್ಕ,ದೈಹಿಕ ಶಿಕ್ಷಣ ಪರಿವೀಕ್ಷಕಿ ವಿಜಯಲಕ್ಷ್ಮಿ ,ಶಿಕ್ಷಣ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top