Slide
Slide
Slide
previous arrow
next arrow

ಅಂತರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ

300x250 AD

ಕಾರವಾರ: ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆ ಅಂಗವಾಗಿ ಕೋಸ್ಟ್ ಗಾರ್ಡ್ ವತಿಯಿಂದ ರವೀಂದ್ರನಾಥ್ ಟ್ಯಾಗೂರ್ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮವು ಶನಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಕಾರವಾರದ ಕೋಸ್ಟ್ ಗಾರ್ಡ್ನ ಸ್ಟೇಶನ್ ಕಮಾಂಡೆಂಟ್ ಕಿರಣ್ ಕುಮಾರ್ ಸಿನ್ಹಾ, ಕೋಸ್ಟ್ ಗಾರ್ಡ್ನ ನಿವೃತ್ತ ಕಮಾಂಡರ್ ಮನೋಜ್ ಬಾಡ್ಕರ್ ಮತ್ತಿತರರು ಇದ್ದರು.
ಕಡಲ ಜೀವಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ಅರಣ್ಯ ಇಲಾಖೆ ಹಾಗೂ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top