Slide
Slide
Slide
previous arrow
next arrow

ನೈಸರ್ಗಿಕ ಪೌಷ್ಠಿಕ ಆಹಾರದ ತಯಾರಿಕೆಗೆ ಉತ್ತೇಜನ: ಸತೀಶ್ ಸೈಲ್

300x250 AD

ಕಾರವಾರ: ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳಿಂದ ತಯಾರಿಸುವ ಪೌಷ್ಠಿಕ ಆಹಾರಗಳು ಮತ್ತು ಜ್ಯೂಸ್‌ಗಳ ಮಾರಾಟ ಆರಂಭಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ಉತ್ತೇಜನ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜನ್ಸಿಯ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.

ಅವರು ಶನಿವಾರ ಕಾರವಾರದ ಅಜ್ವಿ ಓಷನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಹಾಗೂ ಶಿಶು ಅಭಿವೃಧ್ದಿ ಯೋಜನೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗರ್ಭಿಣಿ ಮಹಿಳೆ ಮತ್ತು ಮಗುವಿನ ಪರಿಪೂರ್ಣ ಆರೋಗ್ಯಕ್ಕಾಗಿ ಮತ್ತು ಅಪೌಷ್ಠಿಕತೆಯನ್ನು ನಿವಾರಿಸಲು ಪೌಷ್ಠಿಕ ಆಹಾರ ಸೇವನೆಯು ಅತ್ಯಗತ್ಯವಾಗಿದ್ದು, ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳಿಂದ ಮನೆಗಳಲ್ಲಿಯೇ ಪೌಷ್ಠಿಕ ಆಹಾರ ಸಿದ್ದಪಡಿಸಬಹುದಾಗಿದೆ. ಮಹಿಳೆಯರು ಅನೇಕ ಬಗೆಯ ಪೌಷ್ಠಿಕ ಆಹಾರ ಸಿದ್ದಪಡಿಸುವುದರಲ್ಲಿ ನಿಪುಣರಾಗಿದ್ದು, ಇಂತಹ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲು ಮಾರಾಟ ಮಾಡಲು ಬಯಸಿದ್ದಲ್ಲಿ ಅವರಿಗೆ ಸ್ಥಳಾವಕಾಶ ಸೇರಿದಂತೆ ಎಲ್ಲಾ ರೀತಿಯ ಅನುಮತಿಯನ್ನು ಮತ್ತು ಸಹಕಾರವನ್ನು ನೀಡಲಾಗುವುದು ಎಂದ ಅವರು, ಹಲವು ಮಹಾನಗರಗಳಲ್ಲಿ ಬೆಳಗಿನ ವಾಕಿಂಗ್ ವೇಳೆ ನೈಸರ್ಗಿಕ ತರಕಾರಿಗಳಿಂದ ಹಲವು ರೀತಿಯ ಜ್ಯೂಸ್ ಮಾರಾಟ ನಡೆಯುತ್ತಿದ್ದು, ಇದು ಮಹಿಳೆಯರ ಆದಾಯದ ಮೂಲವೂ ಆಗಿದೆ ಎಂದರು.
ರಾಜ್ಯದಲ್ಲಿ ಗೃಹಲಕ್ಷ್ಮಿಯ ಯೋಜನೆಯ ಮೂಲಕ ಹಲವು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿದ್ದು, ಮಹಿಳೆಯರು ಸ್ವಾಲಂಬಿಗಳಾಗಿದ್ದಾರೆ. ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ, ನಮ್ಮ ಸರ್ಕಾರ ಸದಾ ಬಡವರ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಲಲಿತಾ ಶೆಟ್ಟಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಆಶಾ ಎಂ. ಎಸ್, ಲೀಡ್ ಬ್ಯಾಂಕ್ ಮೆನೇಜರ್ ಭಾರತಿ ವಸಂತ್ ಉಪಸ್ಥಿತರಿದ್ದರು.

300x250 AD

ಪೌಷ್ಠಿಕ ಆಹಾರಗಳ ಪ್ರದರ್ಶನ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತç ವಿತರಣೆ, ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ, ಸುಕನ್ಯಾ ಸಮೃದ್ದಿ ಪಾಸ್ ಬುಕ್‌ಗಳ ವಿತರಣೆ, ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಆರ್ಹ ಪಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಶಿಶು ಅಭಿವೃಧ್ದಿ ಯೋಜನಾಧಿಕಾರಿ ಸೋನಲ್ ಐಗಳ್ ಸ್ವಾಗತಿಸಿದರು, ಮಂಜುಳಾ ವಂದಿಸಿದರು, ಜಯಶ್ರೀ ಪಟಗಾರ ನಿರೂಪಿಸಿದರು.

Share This
300x250 AD
300x250 AD
300x250 AD
Back to top