ಕಾರವಾರ: ಮೂಡಾ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದ ರೂವಾರಿ ಸಿ.ಎಂ. ಸಿದ್ದರಾಮಯ್ಯ ಅವರ ಪ್ರಕರಣ ತನಿಖೆಗೆ ರಾಜ್ಯಪಾಲರ ಅನುಮತಿ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಉತ್ತರಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಕಾರವಾರ ಜಿಲ್ಲಾಧಿಕಾರಿ ಕಛೇರಿ ಎದುರು ಸೆ.24, ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧ್ಯಕ್ಷರಾದ ಎನ್.ಎಸ್.ಹೆಗಡೆ ಕರ್ಕಿ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಉಪಾಧ್ಯಕ್ಷರು & ಕಾರವಾರ ಮಾನ್ಯ ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ನಾಯ್ಕ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ರಾಜೇಂದ್ರ ನಾಯ್ಕ, ನಾಗರಾಜ ನಾಯಕ ಮಾತನಾಡಿದರು.
ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಗೋವಿಂದ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಗಜಾನನ ಗುನಗಾ, ಸಂಜಯ್ ಸಾಳುಂಕೆ, ಕಾರವಾರ ನಗರಸಭಾ ಅಧ್ಯಕ್ಷರಾದ ರವಿರಾಜ ಅಂಕೋಲೇಕರ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ರವಿ ನಾಯ್ಕ ಜಾಲಿ, ಜಿ.ಜಿ. ಶಂಕರ, ರಾಜ್ಯ, ಜಿಲ್ಲಾ ಹಾಗೂ ಮಂಡಲಗಳ ಪಕ್ಷದ ಹಿರಿಯ ಪದಾಧಿಕಾರಿಗಳು, ಕಾರ್ಯಕರ್ತರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಯಿತು.