ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.30 ರಂದು ಸಂಜೆ 5 ಗಂಟೆಗೆ ಕಾರವಾರದ ಅಜ್ವೀ ರೆಸ್ಟೋರೆಂಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ, ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ , ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸೆ.30ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ
