Slide
Slide
Slide
previous arrow
next arrow

ಸೆ.29 ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

300x250 AD

ಕಾರವಾರ: ಪ್ರಸಕ್ತ ಸಾಲಿನ ದಸರಾ ಹಬ್ಬದ ಪ್ರಯುಕ್ತವಾಗಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಮತ್ತು ಥ್ರೋಬಾಲ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.29 ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ.

ಆಯಾ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿತ ಸ್ಥಳದಲ್ಲಿ ಸೆ.29 ರಂದು ಬೆಳಿಗ್ಗೆ 8 ಗಂಟೆಗೆ ವರದಿ ಮಾಡಿಕೊಳ್ಳತಕ್ಕದ್ದು. ಸ್ಪರ್ಧೆಗಳನ್ನು ಅದೇ ದಿನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹರಿದೇವ ನಗರ ಹಬ್ಬುವಾಡ, ಕಾರವಾರ, ದೂ.ಸಂ:Tel:+91948088655/Tel:+917899104699, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಕಿರಣ ನಾಯ್ಕ, ಶಿರಸಿ ದೂ.ಸಂ:Tel:+919449801404/Tel:+918310512418ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಬೆಳಗಾವಿ ವಿಭಾಗದ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫಲಿತಾಂಶ ಪಟ್ಟಿಯನ್ನು ನಿಗಧಿತ ನಮೂನೆಯಲ್ಲಿ ಸೆ,26 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಉತ್ತರ ಕನ್ನಡ ಜಿಲ್ಲೆ, ಇ-ಮೇಲ್ ವಿಳಾಸ: Maito:dysskar@gmail.com ಗೆ ಕಳುಹಿಸಿಕೊಡಬೇಕು. ಭಾಗವಹಿಸುವ ಸ್ಪರ್ಧಾಳುಗಳು ಸ್ಪರ್ಧೆ ನಡೆಸುವ ಸ್ಥಳಗಳಲ್ಲಿ ನಿಗಧಿತ ದಿನಾಂಕದಂದು ಬೆಳಗ್ಗೆ 8 ಗಂಟೆಯೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಬೆಳಗ್ಗೆ 9 ಗಂಟೆಗೆ ಕ್ರೀಡೆಗಳನ್ನು ಪ್ರಾರಂಭಿಸಲಾಗುವುದು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ವಿಭಾಗ ಮಟ್ಟದಲ್ಲಿ ಭಾಗವಹಿಸಲಿರುವ ಸ್ಪರ್ಧೆಗಳು ಕಡ್ಡಾಯವಾಗಿ 2 ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳೊಂದಿಗೆ ಗುರುತಿನ ಚೀಟಿ ತರಬೇಕು. ಯಾವುದೇ ರೀತಿಯ ಅಸಭ್ಯ ಅಥವಾ ಅಶಿಸ್ತಿನ ರೀತಿಯಲ್ಲಿ ವರ್ತಿಸಿದಲ್ಲಿ ಅಂತಹ ಕ್ರೀಡಾಪಟುಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸುವಂತಿಲ್ಲ ಎಂದು ಸಹಾಯಕ ನಿರ್ದೇಶಕರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರವಾರ (ಉ.ಕ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top