ಜೋಯಿಡಾ : ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಜಿಲ್ಲೆಯ ಸಿದ್ದಾಪುರದ ಭವನಗಿರಿಯಿಂದ ಹೊರಟ ಕನ್ನಡ ಜ್ಯೋತಿ ರಥಯಾತ್ರೆಗೆ ಜೋಯಿಡಾದಲ್ಲಿ ಮಂಗಳವಾರ ಭವ್ಯ ಸ್ವಾಗತ ದೊರೆಯಿತು.
ಕನ್ನಡ ಜ್ಯೋತಿ ರಥಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಇಕ್ಕಳ್ಕರ್ ಪೂಜೆಯನ್ನು ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ತಹಶೀಲ್ದಾರ್ ಕಾರ್ಯಾಲಯದಿಂದ ಶಿವಾಜಿ ವ್ರತ್ತದವರೆಗೆ ಮೆರವಣಿಗೆಯ ಮೂಲಕ ರಥಯಾತ್ರೆಯನ್ನು ಕರೆ ತರಲಾಯಿತು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಶೀರ್ ಶೇಖ್, ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಅಹಮದ್ ಶೇಖ್, ಉಪ ತಹಶೀಲ್ದಾರರಾದ ಸಂಜೀವ್ ಭಜಂತ್ರಿ, ಸುರೇಶ ಒಕ್ಕುಂದ, ಜೋಯಿಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಿಮಾ ಮಿರಾಶಿ, ಜೋಯಿಡಾ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಾಂಡುರಂಗ ಪಟಗಾರ, ಶಿಕ್ಷಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಮುಖಂಡರು, ಸದಸ್ಯರು, ಕನ್ನಡಾಭಿಮಾನಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.