ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಡಯಟ್, ಶಿರಸಿ ಲಯನ್ಸ್ ಎಜ್ಯು ಕೇಶನ್ ಸೊಸೈಟಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳ ಸಹಯೋಗದಲ್ಲಿ 2024-25ರ ಸಾಲಿನ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ನಾಟಕ, ವಿಚಾರಗೋಷ್ಠಿ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಸೆ.23ರಂದು ಶಿರಸಿ ಲಯನ್ಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಈ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ.ಜೆ. ಎಫ್ ಲಯನ್ ಪ್ರಭಾಕರ್ ಹೆಗಡೆಯವರು ನಿರ್ವಹಿಸಿದರು. ಪ್ರಾಚಾರ್ಯ ಎಂ.ಎಸ್.ಹೆಗಡೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ನಾಯ್ಕ ಇವರು ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಲಯನ್ಸ್ ಕಾಲೇಜು ಮತ್ತು ಸಮೂಹ ಶಾಲೆಗಳ ಪ್ರಾಂಶುಪಾಲರಾದ ಶಶಾಂಕ್ ಹೆಗಡೆಯವರು ಸರ್ವರಿಗೂ ಸ್ವಾಗತವನ್ನು ಕೋರಿದರು. ಶ್ರೀಮತಿ ಮುಕ್ತಾ ನಾಯ್ಕ ಮಾರ್ಗದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರಿಂದ ಸುಶ್ರಾವ್ಯ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ನಾರಾಯಣ ಭಾಗ್ವತ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಭಾಸ್ಕರ್ ಹೆಗಡೆ ಇವರು ವಂದನಾರ್ಪಣೆ ನೆರವೇರಿಸಿ ಕೊಟ್ಟರು. ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಚೇತನಾ ಹೆಗಡೆ ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.
ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮುಕ್ತಾ ನಾಯ್ಕ ಹಾಗೂ ವಿಜ್ಞಾನ ಶಿಕ್ಷಕಿ ಶ್ರೀಮತಿ ಪವಿತ್ರಾ ನಾಯಕ್ ರಚಿಸಿರುವ ‘The half truth’ ಎಂಬ ಈ ನಾಟಕವನ್ನು ಆರ್.ಕೆ.ಶಿವಕುಮಾರ್ ನಿರ್ದೇಶಿಸಿ,ಉತ್ತಮ ನಿರ್ದೇಶಕ ಪ್ರಶಸ್ತಿಯನ್ನೂ ಪಡೆದಿರುತ್ತಾರೆ. ಶ್ರೀಮತಿ ಲಕ್ಷ್ಮಿ ಪ್ರದೀಪ್ ಹಾಗೂ ಕುಮಾರಿ ಪೃಥ್ವಿ ಹೆಗಡೆ ರಂಗ ಪರಿಕರ ಒದಗಿಸಿದ್ದಾರೆ. ಕುಮಾರಿ ಸಿಂಚನಾ ಶೆಟ್ಟಿ ಹಿನ್ನೆಲೆ ಸಂಗೀತದ ಜವಾಬ್ದಾರಿ ವಹಿಸಿದ್ದು, ಹತ್ತನೇ ವರ್ಗದ ವಿದ್ಯಾರ್ಥಿಗಳಾದ ಕುಮಾರಿ ಪೃಥ್ವಿ ಹೆಗಡೆ, ಸಿಂಚನಾ ಶೆಟ್ಟಿ,ಭುವನಾ ಹೆಗಡೆ, ಸಹನಾ ಭಟ್,ಸಂತೋಷಿ ಪಟಗಾರ,ಪ್ರತೀಕ್ಷಾ ಹೆಗಡೆ, ಭೂಮಿ ಶೆಟ್ಟಿ, ಶಾಂಭವಿ ಕುಮಟಾಕರ ಅಭಿನಯಿಸಿದ್ದಾರೆ. ಶಾಲೆಯ ಆಡಳಿತ ಮಂಡಳಿ,ಪ್ರಾಂಶುಪಾಲರು,ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ,ಪಾಲಕರು ವಿಜೇತ ವಿದ್ಯಾರ್ಥಿಗಳಿಗೆ ಮತ್ತು ತರಬೇತುದಾರರಿಗೆ ಅಭಿನಂಧಿಸಿರುತ್ತಾರೆ.