ಯಲ್ಲಾಪುರ: ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ 105 ನೇ ಜನ್ಮದಿನವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದಲ್ಲಿನ ಪಕ್ಷದ ಕಾರ್ಯಾಲಯದಲ್ಲಿ ದೀಪ ಬೆಳಗಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್ ಗಾಂವ್ಕರ್, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಭಾಗ್ವತ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಡಾ. ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ ಹಾಗೂ ಯುವ ಮೋರ್ಚಾದ ಅಧ್ಯಕ್ಷರಾದ ಪ್ರದೀಪ ಯಲ್ಲಾಪುರಕರ್, ಪ. ಪಂಚಾಯತ ಸದಸ್ಯರಾದ ಸೋಮೇಶ್ವರ ನಾಯ್ಕ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.