ದಾಂಡೇಲಿ : ನಗರದ ಕಾಂಗ್ರೆಸ್ ಮುಖಂಡರು ಹಾಗೂ ಅಂಬೇವಾಡಿಯ ನಿವಾಸಿ ದೇವಕಿ ನಾಯ್ಕ ಬುಧವಾರ ವಿಧಿವಶರಾಗಿದ್ದಾರೆ. ಮೃತರಿಗೆ 68 ವರ್ಷ ವಯಸ್ಸಾಗಿತ್ತು.
ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ದೇವಕಿ ನಾಯ್ಕ ಅವರು ಮಾಜಿ ಮುಖ್ಯಮಂತ್ರಿ ದಿ: ಬಂಗಾರಪ್ಪ ಅವರ ಕಟ್ಟ ಬೆಂಬಲಿಗರಾಗಿದ್ದರು. ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಸರಳ ಸಹೃದಯಿ ವ್ಯಕ್ತಿತ್ವದ ದೇವಕಿ ನಾಯ್ಕ ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ ಹಾಗೂ ಅಪಾರ ಸಂಖ್ಯೆಯಲ್ಲಿ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ, ದಾಂಡೇಲಿ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ ಹಲವಾಯಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ನಗರಸಭೆಯ ಸದಸ್ಯರು ಮತ್ತು ನಗರದ ಗಣ್ಯರನೇಕರು ಕಂಬನಿಯನ್ನು ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.