ಹೊನ್ನಾವರ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.
ಈ ಕುರಿತು ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್ ಉದ್ದೇಶವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ಎಂಬ ಅಡಿಬರಹದ ಅಡಿಯಲಿ, ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ, ಪ್ರಯೋಜನೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದರು.
ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000 ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನದ್ದಾಗಿದ್ದರೂ, ಈ ಉಪಕ್ರಮವು ರಿಯಾಯಿತಿ ವೆಚ್ಚದಲ್ಲಿ, ಆರೋಗ್ಯ ಸೇವೆಯನ್ನು ಖಚಿತಪಡಿಸುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಂಭವಾಗಿ ಕರಾವಳಿ ಮತ್ತು ಮಧ್ಯ ಕರ್ನಾಟಕದ 12-15 ಜಿಲ್ಲೆಗಳಿಗೆ ವಿಸ್ತರಣೆಗೊಂಡಿದೆ. ಕಳೆದ 23 ವರ್ಷಗಳಲ್ಲಿ, ಮಣಿಪಾಲ್ ಆರೋಗ್ಯ ಕಾರ್ಡ್ ಲಕ್ಷಾಂತರ ಜನರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿದೆ. 2023 ರಲ್ಲಿ, 3,60,000 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ, ಇದು ಅದರ ಬೆಳೆಯುತ್ತಿರುವ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ವಿಭಾಗದ ಸಹ ವ್ಯವಸ್ಥಾಪಕ ಕೃಷ್ಣಪ್ರಸಾದ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ, 50% ರಿಯಾಯಿತಿ ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ. 25% ರಿಯಾಯಿತಿ, ರೇಡಿಯಾಲಜಿ, ಹೊರರೋಗಿ ಕಾರ್ಯವಿಧಾನಗಳು ಮತ್ತು, ಮಧುಮೇಹ ಆರೈಕೆಯಲ್ಲಿ,20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ 100ರೂಪಾಯಿ ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್ ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ, (ಕಾನ್ಸುಮೆಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ ಎಂದರು.
ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ- ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು.
ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿ ಹೆಚ್ಚಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, http://www.manipalhealthcard.com ಗೆ ಭೇಟಿ ನೀಡಿ ಅಥವಾ Tel:+919980854700/Tel:+9108202923748 ಅನ್ನು ಸಂಪರ್ಕಿಸಿ, ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ Tel:+916364469750 ಸಂಪರ್ಕಿಸಿ ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ಕುರಿತು ಹೊನ್ನಾವರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸತೀಶ್ ತಾಂಡೇಲ್ ಮಾತನಾಡಿ, ಪ್ರತಿವರ್ಷ ಹೊನ್ನಾವರ ಪತ್ರಕರ್ತರಿಗೆ ಉಚಿತವಾಗಿ ಆರೋಗ್ಯ ಕಾರ್ಡ್ ನೀಡುತ್ತಿದ್ದಾರೆ ಎಂದು ಧನ್ಯವಾದ ಸಲ್ಲಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ವಿಭಾಗದ ಸಹ ವ್ಯವಸ್ಥಾಪಕರಾದ ಚೇತನ್ ಉಪಸ್ಥಿತರಿದ್ದರು.
2024ರ ನೋಂದಾವಣಿಗಾಗಿ ಅರ್ಜಿಗಳ ಅಧಿಕೃತ ಪ್ರತಿನಿಧಿಗಳಾದ ಜಿಯು ಭಟ್, ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಹೊನ್ನಾವರ,ಸೇಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ನ ಎಲ್ಲಾ, ಶಾಖೆಗಳು,ಉಮೇಶ್ ಜಿ.ಎನ್,ಶಿವಕುಮಾರ್ ಅವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.