
ಶಿರಸಿ : ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ‘ಮಾಧ್ಯಮ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.28ರಂದು ನಗರದ ಪೂಗ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10.30ರಿಂದ ಆರಂಭವಾಗಲಿರುವ ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪ ಅವರಿಗೆ ‘ಮಾಧ್ಯಮ ಶ್ರೀ’ ಪ್ರಶಸ್ತಿ ನೀಡಲಾಗಿದ್ದು, ಶಾಸಕರಾದ ಭೀಮಣ್ಣ ನಾಯ್ಕ ಹಾಗೂ ಶಿವರಾಮ ಹೆಬ್ಬಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಆಗಮಿಸಲಿದ್ದು, ತಾಲೂಕು ಪತ್ರಕರ್ತರ ಸಂಘದಿಂದ ಈ ವರ್ಷದಿಂದ ಹೊಸದಾಗಿ ಉತ್ಸಾಹಿ ಬರಹಗಾರರಿಗೆ ನೀಡುತ್ತಿರುವ ‘ಗೋಲ್ಡನ್ ಪೆನ್’ ಪುರಸ್ಕಾರವನ್ನು ಮಂಜುನಾಥ ಸಾಯಿಮನೆ ಅವರಿಗೆ ನೀಡಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.