Slide
Slide
Slide
previous arrow
next arrow

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಕೊಬ್ಬಿನ ಎಣ್ಣೆ ಪ್ರಕರಣ

300x250 AD

ಸೂಕ್ತ ಕ್ರಮಕ್ಕಾಗಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಮಹಾಸಂಸ್ಥೆಯಿಂದ ಮನವಿ

ಭಟ್ಕಳ: ತಿರುಪತಿ ಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಕೊಬ್ಬಿನ ಎಣ್ಣೆ ಬೆರೆಸುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಭಟ್ಕಳದಲ್ಲಿ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಮಹಾ ಸಂಸ್ಥೆಯಿಂದ ತಹಶೀಲ್ದಾರ ಮೂಲಕ ಪ್ರಧಾನ ಮಂತ್ರಿಗಳಿಗೆ ಹಾಗೂ ಸಿಎಂಗೆ ಮನವಿ ಸಲ್ಲಿಸಲಾಯಿತು

ತಿರುಪತಿ ಬಾಲಾಜಿ ದೇವಸ್ಥಾನವು ಪ್ರಪಂಚದಾದ್ಯಂತ ಕೋಟಿಗಟ್ಟಲೆ ಭಕ್ತರ ಆರಾಧನೆಯ ಸ್ಥಳವಾಗಿದೆ. ಇದನ್ನು ಭಗವಾನ್ ಶ್ರೀ ವಿಷ್ಣುವಿನ ನಿಜವಾದ ಭೂವೈಕುಂಠವೆಂದು ಪರಿಗಣಿಸಲಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಪ್ರಸಾದದ ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ಈ ಮಾಹಿತಿಯನ್ನು ನೀಡಿದ್ದಾರೆ. ಇದರಿಂದಾಗಿ ದೇಶಾದ್ಯಂತ ಹಿಂದೂ ಸಮುದಾಯದಲ್ಲಿ ತೀವ್ರ ಆಕ್ರೋಶದ ಅಲೆ ಎದ್ದಿದೆ.

300x250 AD

ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಲಾಡು ಕೇವಲ ಆಹಾರವಲ್ಲ, ಅದು ಭಕ್ತರ ಶ್ರದ್ಧೆ ಭಕ್ತಿ ಮತ್ತು ಆಧ್ಯಾತ್ಮಿಕ ಶಕ್ತಿಯ ಭಾಗವಾಗಿದೆ. ಅಂತಹ ಪವಿತ್ರವಾದ ಪ್ರಸಾದದಲ್ಲಿ ಅಶುದ್ಧ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಅನುಚಿತ ಪದಾರ್ಥಗಳನ್ನು ಪ್ರಾಣಿಗಳ ಕೊಬ್ಬು ಬಳಸುವುದು ಭಕ್ತರಲ್ಲಿ ತೀವ್ರ ಕೋಪವನ್ನು ಉಂಟುಮಾಡಿದೆ. ಪವಿತ್ರವಾದ ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸುವುದು ಒಂದು ಸಾಮಾನ ಅಪರಾಧವಲ್ಲ ಆದ್ದರಿಂದ ಈ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು

ಈ ವೇಳೆ ನಿಚ್ಚಳಮಕ್ಕಿ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನದ ಅಧ್ಯಕ್ಷರಾದ ಅರುಣ ನಾಯ್ಕ್, ಹೆಬ್ಬಳೆ ಸಿದ್ಧಿವಿನಾಯಕ ದೇವಸ್ಥಾನದ ಅಧ್ಯಕ್ಷರಾದ ಶ್ರೀಧರ್ ನಾಯ್ಕ, ದಕ್ಷಿಣ ಕಾಳಿಕಾ ದೇವಸ್ಥಾನದ ವಿಶ್ವಸ್ಥರು & ಸಮಾನಮನಸ್ಕ ಹಿಂದೂ ಸಂಘಟನೆಗಳ ಪದಾಧಿಕಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top