ಶಿರಸಿ : ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತೆರೆಯಬೇಕೆಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಲತಾ ಶಿವಾಜಿ ಕಾಳೇರಮನೆ ಆಗ್ರಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಾಲೂಕಿನಾದ್ಯಂತ ಎಲ್ಲಾ ರೇಷನ್ ಅಂಗಡಿ ಮತ್ತು ಶಾಲಾ, ಕಾಲೇಜು, ಬ್ಯಾಂಕುಗಳಲ್ಲಿ ಆಧಾರ್ ಕಾರ್ಡ್ಗೆ ಫೋನ್ ನಂಬರ್ ಮತ್ತು ಫೋಟೋ ಬದಲಾವಣೆ ಹೆಬ್ಬಟ್ಟು ಮುದ್ರಣದ ಬಗ್ಗೆ ಸಾರ್ವಜನಿಕರು ಪೋಸ್ಟ್ ಆಫೀಸ್ ಮತ್ತು ಬ್ಯಾಂಕುಗಳಿಗೆ ಅಲೆಯುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯ ಬಿಟ್ಟು ಆಧಾರ್ ಕಾರ್ಡ್ಗಾಗಿ ಅಲೆಯುತ್ತಿರುವುದಲ್ಲದೆ, ರೇಷನ್ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಆಧಾರ್ ಕಾರ್ಡ್ ನೀಡಿಕೆ,ಎಲ್ಲಾ ತಿದ್ದುಪಡಿಗೆ ಎಲ್ಲಾ ಗ್ರಾಪಂಗಳಲ್ಲಿ ಆಧಾರ್ ಕೇಂದ್ರ ತೆರೆಯುವಂತೆ ಅವರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರವನ್ನು ತೆರೆಯಲು ಒತ್ತಾಯ
