Slide
Slide
Slide
previous arrow
next arrow

ಸಂಪೂರ್ಣತಾ ಅಭಿಯಾನ: ಜನಜಾಗೃತಿಗಾಗಿ ಬೀದಿ ನಾಟಕ ಪ್ರದರ್ಶನ

300x250 AD

ಮುಂಡಗೋಡ: ನೀತಿ ಆಯೋಗದ ವತಿಯಿಂದ ಅಭಿವೃದ್ಧಿ ಆಂಕಾಕ್ಷಿ ತಾಲೂಕು ಕಾರ್ಯಕ್ರಮದಡಿ ಸಂಪೂರ್ಣತಾ ಅಭಿಯಾನದ ಅಂಗವಾಗಿ ಮುಂಡಗೋಡ ತಾಲೂಕು ವ್ಯಾಪ್ತಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ ಸಾಂಕೇತಿಕವಾಗಿ ತಮಟೆ ಭಾರಿಸುವ ಮೂಲಕ ಚಾಲನೆ ನೀಡಿದರು.

ನೀತಿ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ 6 ಪ್ರಮುಖ ಸೂಚಕಗಳ ಸಂಪೂರ್ಣತೆಯನ್ನು ಸಾಧಿಸಲು ಮತ್ತು ಸುಸ್ಥಿರ ಪ್ರಯತ್ನವನ್ನು ಕೈಗೊಳ್ಳಲು ಜು.4 ರಿಂದ ಸೆ.30 ರವರೆಗೆ 3 ತಿಂಗಳ ಕಾಲ ಸಂಪೂರ್ಣತಾ ಅಭಿಯಾನವನ್ನು ನಡೆಸಲಾಗುತ್ತಿದ್ದು, ಮಹತ್ವಾಕಾಂಕ್ಷಿ ತಾಲೂಕುಗಳಲ್ಲಿ ಗುರುತಿಸಲಾದ 6 ಸೂಚಕಗಳಲ್ಲಿ ಪ್ರತಿಯೊಂದರಲ್ಲೂ ಸಂಪೂರ್ಣತೆಯನ್ನು ಸಾಧಿಸುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡಲಾಗಿದೆ. ಬೀದಿ ನಾಟಕ, ಜಾಗೃತಿ ಗೀತೆಗಳ ಮೂಲಕ ಜನರ ಮನಸ್ಸಿಗೆ ವಿಷಯ ಮುಟ್ಟಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ತಾಲೂಕಿನ ಹುನಗುಂದ, ಇಂದೂರು, ಸಾಲಗಾಂವ, ಮಳಗಿ ಗ್ರಾಮ ಪಂಚಾಯತ್ ಮತ್ತು ತಾಲೂಕು ಆಸ್ಪತ್ರೆ ಆವರಣದಲ್ಲಿ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮೊದಲ ತ್ರೈಮಾಸಿಕದಲ್ಲಿ ಪ್ರಸವಪೂರ್ವ ಆರೈಕೆಗಾಗಿ ಗರ್ಭಿಣಿ ಮಹಿಳೆಯರ ನೋಂದಣಿ, ಅಧಿಕ ರಕ್ತದ ಒತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ, ಗರ್ಭಿಣಿ ಮಹಿಳೆಯರಿಗೆ ಪೋಷಕಾಂಶಯುಕ್ತ ಆಹಾರ ಮತ್ತು ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ಗಳ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಇದೇ ವೇಳೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ಇರುವ ಉದ್ಯೋಗ ಅವಕಾಶ, ಕೂಲಿ ಮೊತ್ತ, ಮಹಿಳೆಯರು, ಹಿರಿಯರು ಮತ್ತು ವಿಶೇಷ ಚೇತನರಿಗೆ ಇರುವ ಸೌಲಭ್ಯಗಳು, ಕೂಸಿನ ಮನೆ, ಏಕೀಕೃತ ಸಹಾಯವಾಣಿ ಸಂಖ್ಯೆ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯ ಕುರಿತು ಜಾಗೃತಿ ಗೀತೆ ಮತ್ತು ನಾಟಕ ಪ್ರಸ್ತುತಪಡಿಸಲಾಯಿತು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ರಾಮು ಬಯಲಸೀಮೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಭಿವೃದ್ಧಿ ಅಂಕಾಕ್ಷಿ ತಾಲೂಕು ಸಂಯೋಜಕಿ ನಕುಲಾಬಾಯಿ, ಮನರೇಗಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಎನ್.ಆರ್.ಎಲ್.ಎಮ್. ಕ್ಲಸ್ಟರ್ ಸೂಪರ್‌ವೈಸರ್ ರಾಮಣ್ಣ ಪನ್ನೇರ, ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top