Slide
Slide
Slide
previous arrow
next arrow

ಜಿಲ್ಲೆಯಲ್ಲಿ ಐಲ್ಯಾಂಡ್ ಪ್ರವಾಸೋದ್ಯಮ ಅಭಿವೃಧ್ದಿಗೆ ಪ್ರಯತ್ನ: ಶಾಸಕ ಸೈಲ್

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಗೋವಾ ರಾಜ್ಯಕ್ಕಿಂತಲೂ ಅತ್ಯುತ್ತಮವಾದ ಪ್ರವಾಸ ತಾಣಗಳಿದ್ದು, ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು , ಕರಾವಳಿ ಭಾಗದಲ್ಲಿರುವ ಐಲ್ಯಾಂಡ್‌ಗಳಲ್ಲಿ ವಿವಿಧ ಪ್ರವಾಸಿ ಚಟುವಟಿಕೆಗಳನ್ನು ಕೈಗೊಳ್ಳುವ ಕುರಿತಂತೆ ಯೋಜನೆ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.

ಅವರು ಶುಕ್ರವಾರ ಕಾರವಾರದ ಅಜ್ವಿ ಓಷನ್ ಸಭಾಂಗಣದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆದ ಚಿತ್ರಕಲಾ ಶಿಬಿರ ಮತ್ತು ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ 130 ಕಿಮೀ ಅಧಿಕ ಕರಾವಳಿ ಪ್ರದೇಶದಲ್ಲಿ ಹಲವು ವೈವಿಧ್ಯಮಯವಾದ ಬೀಚ್‌ಗಳು ಮತ್ತು ಹಲವು ಐಲ್ಯಾಂಡ್‌ಗಳು ಇವೆ. ಸಮುದ್ರ ಮಧ್ಯದಲ್ಲಿರುವ ಈ ದ್ವೀಪಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಆರಂಭಿಸಿದಲ್ಲಿ ಜಿಲ್ಲೆಯು ಪ್ರವಾಸಿಗರಿಗೆ ನೆಚ್ಚಿನ ಆಕರ್ಷಣಿಯ ತಾಣವಾಗಲಿದೆ. ದ್ವೀಪಗಳಲ್ಲಿ ಪ್ರವಾಸೋದ್ಯಮ ಅಭಿವೃಧಿಗೆ ಸಿ.ಆರ್.ಝಡ್ ಸೇರಿದಂತೆ ಯಾವುದೇ ಕಾನೂನುಗಳ ಉಲ್ಲಂಘನೆ ಆಗದಂತೆ, ಕಾನೂನು ವ್ಯಾಪ್ತಿಯಲ್ಲಿಯೇ ಅಭಿವೃದ್ದಿಪಡಿಸುವ ಕುರಿತಂತೆ ತಜ್ಞರ ತಂಡವನ್ನು ರಚಿಸಿ ಪರಿಶೀಲನೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಾಳಿ ನದಿ, ಶರಾವತಿ ನದಿ, ಅಘನಾಶಿನಿ, ಗಂಗಾವಳಿ ನದಿ ಪ್ರದೇಶದ ಹಿನ್ನೀರಿನಲ್ಲಿ ಪ್ರವಾಸೋದ್ಯಮ ಅಭಿವೃಧ್ದಿಗೆ ಸಾಕಷ್ಟು ಅವಕಾಶಗಳಿದ್ದು, ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಒಟ್ಟಾಗಿ ಪ್ರಯತ್ನಿಸಿ, ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು.
ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆಗಳಿಂದ ಸಾರ್ವಜನಿಕರಿಗೆ ಹಾಗೂ ಮೀನುಗಾರಿಕಾ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ಯೋಜನೆಗಳನ್ನು ರೂಪಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಜಿಲ್ಲಾ ಪಂಚಾಯತ್ ವತಿಯಿಂದ ಮನರೇಗಾ ಸೇರದಿಂತೆ ವಿವಿಧ ಯೋಜನೆಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಪ್ರವಾಸೋದ್ಯಮ ಭಾಗೀದಾರರೊಂದಿಗೆ ಕನೆಕ್ಟ್ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿ ಸುಂದರ ಪ್ರವಾಸಿ ತಾಣಗಳನ್ನು ಪರಿಚಯಿಸುವ ಕಾರ್ಯಕ್ರಮಗಳು ನಡೆಯಬೇಕು. ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ ವೈವಿಧ್ಯಮಯ ಸಂಸ್ಕೃತಿಗಳ ಪರಿಚಯ ಸಾಧ್ಯವಾಗಲಿದೆ ಎಂದರು.
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ 40 ಕ್ಕೂ ಹೆಚ್ಚು ಜಲಪಾತಗಳು, ಪಶ್ವಿಮ ಘಟ್ಟದ ಜೀವ ವೈವಿದ್ಯ ತಾಣಗಳು ಸೇರದಿಂತೆ 100 ಕ್ಕೂ ಹೆಚ್ಚು ಪ್ರವಾಸಿ ತಾಣಗಳಿದ್ದು ಪ್ರವಾಸಿಗರಿಗೆ ಅತ್ಯುತ್ತಮವಾದ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ್ನು ರಾಜ್ಯಾದ್ಯಂತ ಪರಿಚಯಿಸುವ ಉದ್ದೇಶದಿಂದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ 70 ಕ್ಕೂ ಅಧಿಕ ಚಿತ್ರ ಕಲಾವಿದರು ಭಾಗವಹಿಸಿದ್ದು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪ್ರವಾಸೋದ್ಯಮ ದಿನಾಚರಣೆಯನ್ನು 3 ದಿನಗಳ ಕಾಲ ಅಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಲಾವಿದರಾದ ರಾಘವೇಂದ್ರ ಕೆ , ಮನೋಜ್ ಚಕ್ರವರ್ತಿ, ರವಿ ಗುನಗಾ ಉಪಸ್ಥಿತರಿದ್ದರು.ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಚಿತ್ರಕಲಾ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top