ಅಂಕೋಲಾ: ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಸಮಿತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರವಾರ, ಅಂಕೋಲಾ, ಕುಮಟಾ ಕಲ್ಲು ಕ್ರಷರ್ ಮತ್ತು ಕ್ವಾರಿ ಮಾಲಿಕರ ಅಸೋಸಿಯೇಷನ್ ವತಿಯಿಂದ ತಾಲೂಕಿನ ನದಿಭಾಗ ಹೊನೆಗುಡಿ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಹಿರಿಯ ಭೂ ವಿಜ್ಞಾನಿ ಆಶಾ ಅವರ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಿಬ್ಬಂದಿಗಳು ಅಧಿಕೃತ ಪರವಾನಗಿ ಹೊಂದಿರುವ ಕ್ವಾರಿ, ಉಸುಕು ಉದ್ಯಮಿಗಳು ಪಾಲ್ಗೊಂಡು ಕಡಲ ತೀರದಲ್ಲಿ ಬಿದ್ದ ಕಸ ಕಡ್ಡಿಗಳು, ಪ್ಲಾಸ್ಟಿಕ್ ಮತ್ತಿತರ ವಸ್ತುಗಳನ್ನು ಆಯ್ದು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಭೂ ವಿಜ್ಞಾನಿ ಆಶಾ ಮಾತನಾಡಿ ಸ್ವಚ್ಛತೆಯೇ ಸೇವೆ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ದೃಷ್ಟಿಯಿಂದ ಕಡಲ ತೀರದಲ್ಲಿ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಗಿದೆ ಎಂದರು.