Slide
Slide
Slide
previous arrow
next arrow

ಮಳಗಿಯಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ

300x250 AD

ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕರಮ್ ಕಟ್ಟೆ ಅಮೃತ ಸರೋವರದ ಆವರಣದಲ್ಲಿ ಮಂಗಳವಾರ “ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ” ಅಭಿಯಾನದಡಿ ನಡೆದ ಸ್ವಚ್ಛತಾ ಕಾರ್ಯಕ್ಕೆ ತಾಲೂಕು ಪಂಚಾಯತ್ ಯೋಜನಾ ಅಧಿಕಾರಿ ಮಲ್ಲಿಕಾರ್ಜುನ ಬಿಕ್ಕಣವರ ಚಾಲನೆ ನೀಡಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ, ಅಭಿವೃದ್ಧಿ ಪಡಿಸಲಾಗುತ್ತಿದೆ. ಸಾಂಪ್ರದಾಯಿಕ ಜಲಮೂಲಗಳಾದ ಕೆರೆ, ಕಟ್ಟೆ, ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸುವುದು ಮಾತ್ರವಲ್ಲದೇ ಅವುಗಳ ಸ್ವಚ್ಛತೆಯ ಪ್ರಾಮುಖ್ಯತೆಯನ್ನು ತಿಳಿಯಪಡಿಸಲು ಅಭಿಯಾನ ಕೈಗೊಳ್ಳುವ ಮೂಲಕ ಜನ ಜಾಗೃತಿ ಮಾಡಲಾಗುತ್ತಿದೆ ಎಂದರು.
ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಅರಣ್ಯ ಪ್ರದೇಶ ಮತ್ತು ಜಲ ಮೂಲಗಳ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿದೆ. ಹಳ್ಳಿಗಳಲ್ಲಿ ಕೆರೆ, ಬಾವಿಗಳು ಇನ್ನು ಜೀವಂತವಾಗಿದ್ದು, ಅವುಗಳನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ಇರುವಂತಹ ಉದ್ಯೋಗ ಅವಕಾಶ, ಕೂಲಿ ಮೊತ್ತ, ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳು ಹಾಗೂ ಯೋಜನೆಯಡಿ ದುರ್ಬಲ ವರ್ಗಕ್ಕಿರುವ ಸೌಲಭ್ಯಗಳು ಸೇರಿದಂತೆ ಹಲವು ಉಪಯುಕ್ತ ಮಾಹಿತಿಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಶ್ರೀ ಹಜಾರೆ, ತಾಂತ್ರಿಕ ಸಂಯೋಜಕ ಅಲೋಕ ವಿ. ನಾಯಕ, ಪಂಚಾಯತ್ ಸಿಬ್ಬಂದಿ, ಬಿಎಫ್‌ಟಿ, ಸ್ವಚ್ಛತಾ ಕರ್ಮಚಾರಿಗಳು ಮತ್ತು ಕೂಲಿಕಾರರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top