Slide
Slide
Slide
previous arrow
next arrow

ಶ್ರೀನಿಕೇತನದಲ್ಲಿ ಗಾಂಧಿ ಜಯಂತಿ, ಶಾಸ್ತ್ರೀಜಿ ಜಯಂತಿ

300x250 AD



ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಅ.2, ಬುಧವಾರದಂದು ಗಾಂಧಿ ಜಯಂತಿ ಹಾಗೂ ಶಾಸ್ತ್ರೀಜಿ ಜಯಂತಿಯನ್ನು ಆಚರಿಸಲಾಯಿತು. ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಸಮರ್ಪಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ಸ್ವಚ್ಛತೆಯ ಕುರಿತು ಮಕ್ಕಳಲ್ಲಿ ಜಾಗೃತೆ ಮೂಡಿಸುವ ನಿಟ್ಟಿನಲ್ಲಿ  ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮಾನವ ಸರಪಳಿಯನ್ನು ನಿರ್ಮಿಸಿ ಸ್ವಚ್ಛತಾ ಪ್ರಮಾಣ ವಚನವನ್ನು ಬೋಧಿಸಲಾಯಿತು ಹಾಗೂ ಶ್ರಮದಾನವನ್ನು ನಡೆಸಲಾಯಿತು.

300x250 AD
Share This
300x250 AD
300x250 AD
300x250 AD
Back to top