Slide
Slide
Slide
previous arrow
next arrow

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಯೋಗೇಶ್ ರಾಯ್ಕರ್

300x250 AD

ಹೊನ್ನಾವರ : ತಾಲೂಕಿನ ಉಪ್ಪೋಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉಪ್ಪೋಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆಯಿತು.

ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಉದ್ಯಮಿ ಯೋಗೇಶ ರಾಯ್ಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮ ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತಿದೆ. ಬಾಲ್ಯದಲ್ಲೇ ವಿದ್ಯಾರ್ಥಿಗಳು ಕ್ರಿಯಾಶೀಲಗೊಳ್ಳಲು ಇಂತಹ ವೇದಿಕೆ ಅವಕಾಶ ಮಾಡಿ ಕೊಟ್ಟಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ. ಪಂ. ಅಧ್ಯಕ್ಷ ಗಣೇಶ್ ಟಿ.ನಾಯ್ಕ ಮಾತನಾಡಿ ಬಾಲ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೊರ್ಪಡಿಸಲು ಈ ಕಾರ್ಯಕ್ರಮದಿಂದ ಸಾಧ್ಯವಾಗಿದೆ. ಪಾಲಕರ, ಶಿಕ್ಷಕರ ಮಾರ್ಗದರ್ಶನ ಪಡೆದು ಮುನ್ನೆಡಯ ಬೇಕು ಎಂದರು. ಗ್ರಾಮ ಪಂಚಾಯತದಿಂದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲು ಧನ ಸಹಾಯ ಮತ್ತು ಆಗಮಿಸಿರುವಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಸಹ ಬೆಳಗಿನ ಉಪಹಾರವನ್ನು ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿದರು.

300x250 AD

ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಜಿಲ್ಲಾ ಸಂಘದ ಗೌರಾವ್ಯಾಧ್ಯಕ್ಷರಾದ ಸುದೀಶ್ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಶ್ರೀಮತಿ ಸಾಧನ ಬರ್ಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತದ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್. ಎಂ. ಭಟ್ ಇವರು ಸ್ವಾಗತಿಸಿದರು. ರಮಾನಂದ ನಾಯ್ಕ ವಂದಿಸಿದರು. ಸುಬ್ರಾಯ ಶಾನಭಾಗ್ ಮತ್ತು ಹರಿಶ್ಚಂದ್ರ ನಾಯ್ಕ ಇವರು ನಿರ್ವಹಣೆ ಮಾಡಿದರು.

Share This
300x250 AD
300x250 AD
300x250 AD
Back to top