ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಅ. 9 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸಾಯಿ ಮಂದಿರ ರಸ್ತೆಯಲ್ಲಿನ ಇಂದಿರಾಕಾಂತ ಸಭಾ ಭವನ (ಮುರುಳಿಧರ ಮಠ) ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ ಎಮ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ, ಅಮರೇಂದ್ರ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್, ಪೊಲೀಸ್ ಉಪಾಧೀಕ್ಷಕ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಎಸ್.ವಿ. ಗಿರೀಶ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಬಿ. ನಾಯ್ಕ ಮತ್ತಿತ್ತರರು ಭಾಗವಹಿಸಲಿದ್ದಾರೆ.