Slide
Slide
Slide
previous arrow
next arrow

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗ ಮೇಳ ಅತ್ಯುತ್ತಮ ಮಾರ್ಗ: ಅಷ್ಪಾಕ್ ಶೇಖ್

300x250 AD

ದಾಂಡೇಲಿಯಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ದಾಂಡೇಲಿ : ನಗರದ ಸಾಪ್ಟೆಕ್ ಶಿಕ್ಷಣ ಸಂಸ್ಥೆ, ನಮ್ಮ ನಾಡ ಒಕ್ಕೂಟ, ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಷ್ಠಿತ ಕಂಪನಿಗಳ ಸಹಯೋಗದಲ್ಲಿ ರೋಟರಿ ಶಾಲೆಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ, ನಿರುದ್ಯೋಗಿ ಯುವಜನತೆ ಉದ್ಯೋಗಕ್ಕಾಗಿ ಅಲ್ಲಿ ಇಲ್ಲಿ ಅಲೆದಾಡುವುದನ್ನು ತಪ್ಪಿಸಲು ಈ ಉದ್ಯೋಗ ಮೇಳ ಪ್ರಯೋಜನಕಾರಿಯಾಗಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಇದು ಒಂದು ಅತ್ಯುತ್ತಮವಾದ ಪ್ರಯತ್ನವಾಗಿದ್ದು, ಈ ಭಾಗದ ಯುವ ಜನತೆಗೆ ಉದ್ಯೋಗದ ಆಸರೆಯನ್ನು ನೀಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಮೂಡಿಬರಲಿ ಎಂದರು. ಅತ್ಯುತ್ತಮವಾದ ಹಾಗೂ ನಗರದ ಆರ್ಥಿಕತೆಗೆ ಬಹುದೊಡ್ಡ ಸಹಕಾರಿ ಆಗುವ ಈ ಕಾರ್ಯಕ್ರಮವನ್ನು ಆಯೋಜಿಸಿದ ಸಂಘಟಕರ ಸಾಮಾಜಿಕ ಬದ್ಧತೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭೆಯ ಉಪಾಧ್ಯಕ್ಷೆ ಶಿಲ್ಪಾ ಕೋಡೆ, ನಮ್ಮ ನಾಡ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಇನಾಯಿತ್ತುಲ್ಲಾ ಶಾಬಾಂದ್ರಿ, ಬಾಶ್ ಕಂಪೆನಿಯ ಅಧಿಕಾರಿಗಳಾದ ಕಲೀಮ್ ಮತ್ತು ಸುಧೀರ.ಡಿ.ಪಿಡ್ಡಿ, ನಮ್ಮ ನಾಡ ಒಕ್ಕೂಟದ ತಾಲೂಕು ಅಧ್ಯಕ್ಷ ರಿಯಾಜ್ ಬಾಬು ಸೈಯದ್, ನಮ್ಮ ನಾಡ ಒಕ್ಕೂಟದ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಡಿ, ಹಿರಿಯ ಪತ್ರಕರ್ತರಾದ ಯು.ಎಸ್. ಪಾಟೀಲ್, ರೋಟರಿ ಕ್ಲಬ್ಬಿನ ಪ್ರಧಾನ ಕಾರ್ಯದರ್ಶಿ ಅಶುತೋಷ್ ಕುಮಾರ್ ರಾಯ್ ಮೊದಲಾದವರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭವನ್ನು ಕೋರಿದರು.

300x250 AD

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರಾಹುಲ್ ಬಾವಾಜಿ ಅವರು ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ. ನಿರುದ್ಯೋಗಿ ಯುವ ಜನತೆಗೆ ಬದುಕು ಕಟ್ಟಿಕೊಳ್ಳಲು ಕಂಪನಿ ಹಾಗೂ ನಿರುದ್ಯೋಗಿಗಳ ನಡುವೆ ಸೇತುವೆಯ ರೂಪದಲ್ಲಿ ಈ ಉದ್ಯೋಗ ಮೇಳ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ಕಾರ್ಯಕ್ರಮದ ಮುಖ್ಯ ರೂವಾರಿ ಸಾಪ್ಟೆಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸೈಯದ್ ಇಸ್ಮಾಯಿಲ್ ತಂಗಳ ಅವರು ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಬಾಶ್ ಬ್ರಿಡ್ಜ್ ಸೇರಿದಂತೆ ಅನೇಕ ಕಂಪನಿಗಳು ಆಗಮಿಸಿದ್ದು ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗದ ಆಸರೆಯನ್ನು ನೀಡಲಿದೆ ಎಂದರು. ಇಂತಹ ಕಾರ್ಯಕ್ರಮವನ್ನು ಮುಂದೆಯೂ ಸರ್ವರ ಸಹಕಾರದಲ್ಲಿ ಆಯೋಜಿಸಲಾಗುವುದು ಎಂದರು.

ಸೈಯದ್ ಇಸ್ಮಾಯಿಲ್ ತಂಗಳ ಸ್ವಾಗತಿಸಿದ ಕಾರ್ಯಕ್ರಮಕ್ಕೆ ರಾಹುಲ್ ಬಾವಾಜಿ ವಂದಿಸಿದರು. ಅನುರಾಧಾ ಕಾರ್ಯಕ್ರಮವನ್ನು ನಿರೂಪಿಸಿದರು. ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top