ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಲಾಗಿರುವಂತೆಯೇ, ಉಳಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾತನಾಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದಿಂದ ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಜನರ ಆರ್ಥಿಕ ಪರಿಸ್ಥಿತಿ ನೋಡಿಕೊಂಡು, ಅಂತಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸ್ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
2017 ರಿಂದ ತೊಡಗಿದಂತೆ ರಾಜ್ಯದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಸುಮಾರು 1 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಉಚಿತ ಪಾಸ್‍ಗೆ ಸೇವಾಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ